ಡಿ.ಸಿ. ಪಾವಟೆ ಅವರ ೧೨೭ನೇ ಜಯಂತಿ ಆಚರಣೆ

ಡಿ.ಸಿ. ಪಾವಟೆ ಅವರ ೧೨೭ನೇ ಜಯಂತಿ ಆಚರಣೆ Celebration of D.C. Pavate's 127th Birth Anniversary

ಲೋಕದರ್ಶನ ವರದಿ

ಹುಬ್ಬಳ್ಳಿ ೨೪: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಶಿಲ್ಪಿ, ಖ್ಯಾತ ಶಿಕ್ಷಣ ತಜ್ಞ, ಪದ್ಮಭೂಷಣ ಡಾ. ದಾದಪ್ಪ ಚಿಂತಪ್ಪ ಪಾವಟೆ (ಡಾ. ಡಿ.ಸಿ. ಪಾವಟೆ) ಅವರ ೧೨೭ನೇ ಜಯಂತಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ಮಾತನಾಡಿದ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಡಿ.ಸಿ. ಪಾವಟೆ ಅವರು ಗಣಿತಶಾಸ್ತöç ಕ್ಷೇತ್ರದಲ್ಲಿ ಅಪೂರ್ವ ಸಂಶೋಧನೆಗಳನ್ನು ನಡೆಸಿ, ತಮ್ಮ ಜ್ಞಾನ, ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ದೇಶದ ಉನ್ನತ ಸ್ಥಾನಗಳನ್ನು ಅಲಂಕರಿಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದರು. 

ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ ಸೋಹನ್ ಸುರೇಶ ಹೊರಕೇರಿ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ಸುರೇಶ ಡಿ. ಹೊರಕೇರಿ, ಕುಲಸಚಿವರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. 

ಡಾ. ಸುರೇಶ ಡಿ. ಹೊರಕೇರಿ ಅವರು ಪದ್ಮಭೂಷಣ ಡಾ. ಡಿ.ಸಿ. ಪಾವಟೆ ಅವರ ಜನ್ಮದಿನದ ಅಂಗವಾಗಿ ಗೌರವಪೂರ್ವಕ ನಮನ ಸಲ್ಲಿಸಿದರು.