ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆ
Celebration of Jagadguru Sri Renukacharya's Jayanti
ತಾಳಿಕೋಟೆ 02 : ಪಟ್ಟಣದ ತಾಲೂಕ ಆಡಳಿತದ ವತಿಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರದೀಪ ದೇವಗಿರಿ ತಹಶೀಲ್ದಾರ್ ಗ್ರೇಡ್- 2 ಅವರು ಶ್ರೀ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಎಲ್ಲರಿಗೂ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳು ಮಾತನಾಡಿ ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆಯನ್ನು ಬಯಸಿದವರು ಅವರು ಧರ್ಮದಿಂದಲೇ ಜಗತ್ತಿಗೆ ಶಾಂತಿ ಲಭಿಸುತ್ತದೆ ಎಂಬ ಸಂದೇಶವನ್ನು ನೀಡಿದ್ದಾರೆ ಅವರ ಬದುಕಿನ ಆದರ್ಶಗಳ ಪ್ರಾಮಾಣಿಕ ಅನುಸರಣೆಯನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಬೇಡ ಜಂಗಮ ಸಮಾಜದ ತಾಲೂಕ ಘಟಕದ ಅಧ್ಯಕ್ಷರಾದ ಶರಣಯ್ಯ ಹಿರೇಮಠ, ಗುರು ಹಿರೇಮಠ, ಶಿವಶಂಕರಯ್ಯ ಹಿರೇಮಠ, ಉಪಾಧ್ಯಕ್ಷ ಶಿವಲಿಂಗಯ್ಯ ಹಿರೇಮಠ, ಕಾರ್ಯದರ್ಶಿ ಈರಯ್ಯ ಹಿರೇಮಠ, ಸಂಘಟನಾ ಕಾರ್ಯದರ್ಶಿ ಗಜದಂಡಯ್ಯ ಹಿರೇಮಠ, ಸಮಾಜದ ಸದಸ್ಯರು ಗಣ್ಯರು ಹಿರಿಯರು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 