ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ಲೋಕದರ್ಶನ ವರದಿ

ಶೇಡಬಾಳ 2: ನೂತನ ತಾಲೂಕ ಕೇಂದ್ರವಾಗಿರುವ ಕಾಗವಾಡ ಪಟ್ಟಣದಲ್ಲಿ 64 ನೇ ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡಾಭಿಮಾನಿಗಳು ಸಡಗರ, ಸಂಭ್ರಮದಿಂದ ಆಚರಿಸಿದರು. 

ಕಾಗವಾಡ ತಹಶೀಲ್ದಾರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪೋಲಿಸ್ ಇಲಾಖೆ, ಅರಣ್ಯ ಇಲಾಖೆ, ಮಾರುಕಟ್ಟೆ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ, ಜೈ ಕನರ್ಾಟಕ ಸಂಘ, ಶಿವಾನಂದ ಮಹಾವಿದ್ಯಾಲಯ, ಮಲ್ಲಿಕಾಜರ್ುನ ವಿದ್ಯಾಲಯ, ಬಾಬಾಗೌಡ ಪಾಟೀಲ ಕಾನ್ವೆಂಟ ಶಾಲೆ, ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ, ಮರಾಠಿ ಶಾಲೆ, ಉರ್ದು ಶಾಲೆ, ಎಲ್ಲ ಸರ್ಕಾರಿ ಇಲಾಖೆಗಳ ಹಾಗೂ ಕನ್ನಡ ಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಇಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ಸರ್ಕಲ್ನಲ್ಲಿ ಆಯೋಜಿಸಲಾಗಿದ್ದ 64 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಪ.ಪೂ. ಶ್ರೀ ಯತೀಶ್ವರಾನಂದ ಸ್ವಾಮಿಜಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ, ದತ್ತ ಸಕ್ಕರೆ ಸಹಕಾರಿ ಕಾರ್ಖಾನೆ ಉಪಾಧ್ಯಕ್ಷ ಸಿದ್ಧಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಚೌಗಲಾ ಮೊದಲಾದ ಗಣ್ಯ ಮಾನ್ಯರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಕಿತ್ತೂರ ಚೆನ್ನಮ್ಮ ಸರ್ಕಲ್ನಿಂದ ಹಲವಾರು ವಾದ್ಯ ವೈಭವದೊಂದಿಗೆ ಪ್ರಾರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಸರ್ಕಲಗೆ ಬಂದು ಮುಕ್ತಾಯಗೊಂಡಿತು.  ಮೆರವಣಿಗೆಯುದ್ದಕ್ಕೂ ಕನ್ನಡ ಪರ ಗೀತೆಗಳಿಗೆ ಯುವಕರು ಜೈಕಾರ ಹಾಕುತ್ತಾ ನರ್ತಿಸುತ್ತಾ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು.

ಈ ಸಮಯದಲ್ಲಿ ಪ.ಪೂ. ಶ್ರೀ ಯತೀಶ್ವರಾನಂದ, ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ, ಉಪ ತಹಶೀಲ್ದಾರ ವ್ಹಿ.ಬಿ.ಚೌಗಲಾ, ಕಂದಾಯ ಅಧಿಕಾರಿ ಬಿ.ಬಿ. ಬೋರಗಲ್, ದತ್ತ ಸಕ್ಕರೆ ಸಹಕಾರಿ ಕಾರ್ಖಾನೆ ಉಪಾಧ್ಯಕ್ಷ ಸಿದ್ಧಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಚೌಗಲಾ, ತಾಪಂ ಸದಸ್ಯೆ ಜ್ಯೋತಿ ದೇವನೆ, ಶಿವಾನಂದ ಮಹಾವಿದ್ಯಾಲಯದ ಪ್ರಾ. ಡಾ.ಎಸ್.ಓ.ಹಲಸಗಿ, ಕರ್ನಾಟಕ ರಕ್ಷಣಾ ವೇದಿಕೆ, ಜೈ ಕರ್ನಾಟಕ, ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಇದ್ದರು. ಶಿಕ್ಷಕ ಎಸ್.ಎ.ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ಕಾಗವಾಡ ಪೋಲಿಸ ಇಲಾಖೆ ಸಿಬ್ಬಂದಿ ವರ್ಗ ಸೂಕ್ತ ಬಂದೊಬಸ್ತ ವ್ಯವಸ್ಥೆ ಕೈಗೊಂಡಿದ್ದರು.