ಸಂಭ್ರಮದಿಂದ ಭಗವಾನ್ ಮಹಾವೀರರ ಜಯಂತಿ ಆಚರಣೆ
Celebration of Lord Mahavira Jayanti with enthusiasm
ಲೋಕದರ್ಶನ ವರದಿ
ಕಂಪ್ಲಿ 01; ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಶತಮಾನದ ಶಾಲೆಯಲ್ಲಿ ಜೈನ ಸಮಾಜದ ತೀಥಂರ್ಕರರಾದ ಭಗವಾನ್ ಮಹಾವೀರರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಶಿಕ್ಷಕ ರವಿಕುಮಾರ ಮಾತನಾಡಿ, ಸತ್ಯ, ಅಹಿಂಸೆ, ಉಪವಾಸ, ಅಪರಿಗ್ರಹ ಮೊದಲಾದ ಮೌಲ್ಯಗಳನ್ನು ಬೋಧಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದ ಮಹಾನ್ ಚೇತನ ಭಗವಾನ್ ಮಹಾವೀರರಾಗಿದ್ದಾರೆ. ಇಂತಹ ಮಹಾನೀಯರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕೆಂದರು. ಇದಕ್ಕೂ ಮುನ್ನ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಪುಷ್ಾರೆ್ಪಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಬಿ.ಎಸ್.ಸದ್ಯೋಜಾತಪ್ಪ, ಶಿಕ್ಷಕರಾದ ಶಿವನೇಗೌಡರ ರಾಮಪ್ಪ, ಮಂಜುನಾಥ್, ಧನಂಜಯ ರೆಡ್ಡಿ, ದೇವರಾಜ, ಮಾರೇಸ್ ಸೇರಿದಂತೆ ಇತರೆ ಶಿಕ್ಷಕರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 