ನಾಗರ ಪಂಚಮಿ ಆಚರಣೆ
Celebration of Nagara Panchami
ಲಕ್ಷ್ಮೇಶ್ವರ, ಆ.20: ನಾಗರ ಪಂಚಮಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಸಂಭ್ರಮದಿಂದ ನಾಗದೇವತೆಗೆ ಪೂಜೆ ಸಲ್ಲಿಸಿ ಹಾಲೆರೆಯುವ ಮೂಲಕ ಹಬ್ಬ ಆಚರಿಸಿದರು.
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸಲಾಗುವ ನಾಗರ ಪಂಚಮಿ ಪ್ರಮುಖ ಧಾರ್ಮಿಕ ಹಬ್ಬವಾಗಿದ್ದು, ಪ್ರಕೃತಿ ಹಾಗೂ ಜೀವಸಂಕುಲದ ನಡುವಿನ ಸಂಬಂಧವನ್ನು ಸಾರುತ್ತದೆ. ನಾಗದೇವತೆಯನ್ನು ಪೂಜಿಸುವುದರಿಂದ ಕುಟುಂಬಕ್ಕೆ ರಕ್ಷಣೆ, ಆರೋಗ್ಯ ಹಾಗೂ ಸಮೃದ್ಧಿ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ.
ಹಬ್ಬದ ಅಂಗವಾಗಿ ಮಹಿಳೆಯರು ಹೊಸ ಬಟ್ಟೆ ಧರಿಸಿ ನಾಗರಕಟ್ಟೆಗಳಿಗೆ ತೆರಳಿ ಹಾಲು, ಹಣ್ಣು, ಹೂವು ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳೊಂದಿಗೆ ನಾಗದೇವತೆಗೆ ಪೂಜೆ ಸಲ್ಲಿಸಿದರು. ಕೆಲವೆಡೆ ಮಣ್ಣಿನಿಂದ ಅಥವಾ ಬೆಳ್ಳಿಯಿಂದ ತಯಾರಿಸಿದ ನಾಗವಿಗ್ರಹಗಳಿಗೆ ಹಾಗೂ ಹುತ್ತಗಳಿಗೆ ಪೂಜೆ ನೆರವೇರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 