ಪಟ್ಟಣದಲ್ಲಿ ನುಲಿ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
Celebration of Nuli Chandayya and Brahmashree Narayana Guru Jayanti in the town
ಲೋಕದರ್ಶನ ವರದಿ
ಕಂಪ್ಲಿ, ಆಗಸ್ಟ್ 28: ವಚನಗಳು ಸಾಮಾನ್ಯ ಜನರ ನಾಡಿಮಿಡಿತಗಳಾಗಿ, ವೈಚಾರಿಕ ಹಾಗೂ ವೈಜ್ಞಾನಿಕ ಮನೋಚಿಂತನೆಗೆ ತಮ್ಮ ಕಾಯಕದ ಮೂಲಕ ಮಹತ್ವವನ್ನು ಶಿವಶರಣರು ನೀಡಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿವಶರಣ ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಭಾಷೆ ಹಾಗೂ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿದ್ದು, ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು. ನುಲಿ ಚಂದಯ್ಯ ಸೇರಿದಂತೆ ಶಿವಶರಣರ ಕಾಯಕನಿಷ್ಠೆ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜನಸಮೂಹವನ್ನು ಅಜ್ಞಾನವೆಂಬ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕೊಂಡೊಯ್ದ ಶ್ರೀ ನಾರಾಯಣಗುರು ಅವರು ಸಮಾಜಕ್ಕೆ ಹೊಸ ದಿಕ್ಕು ತೋರಿದ ಕ್ರಾಂತಿಪುರುಷರಾಗಿದ್ದರು. ಶಿಕ್ಷಣದ ಮೂಲಕ ಜ್ಞಾನವಂತರಾಗಬೇಕು ಎಂಬ ಸಂದೇಶವನ್ನು ಅವರು ಸಾರಿದರು ಎಂದು ತಿಳಿಸಿದರು.
ಸಮಾಜದಲ್ಲಿದ್ದ ಜಾತಿ-ಭೇದ, ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಹೋರಾಡಿದ ನಾರಾಯಣಗುರುಗಳ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ತತ್ವಗಳನ್ನು ಯುವಜನತೆ ಅರಿತುಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಭಾರಿ ಉಪತಹಶೀಲ್ದಾರ್ ರಮೇಶ್, ಶಿರಸ್ತೇದಾರ್ ಪಂಪಾಪತಿ, ಕಂದಾಯ ನೀರೀಕ್ಷಕ ಸುರೇಶ್, ಕೊರಚ-ಕೊರವ ಸಮಾಜದ ಅಧ್ಯಕ್ಷ ಕೆ.ಯಂಕಪ್ಪ, ಕಾರ್ಯದರ್ಶಿ ಕೆ.ವಿರುಪಾಕ್ಷಿ, ಕೊರವ ತಾಲೂಕು ಅಧ್ಯಕ್ಷ ಕೆ.ಗಂಗಾಧರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಈ.ನರಸಪ್ಪ, ಬಸವರಾಜ, ಗಂಗಾಧರಗೌಡ, ಧನ್ರಾಜ್, ಈ.ಕೆ.ಶ್ರೀನಿವಾಸ, ಶಿವಕುಮಾರ್, ಲಕ್ಷ್ಮೀ, ಈ.ಪಿ.ಇದ್ದಪ್ಪ, ವೆಂಕಟೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಯಂತಿ ಕಾರ್ಯಕ್ರಮದ ಅಂಗವಾಗಿ ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 