ನುಲಿ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ನುಲಿ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ  Celebration of Nuli Chandayya and Brahmashree Narayana Guru Jayanti

ಲೋಕದರ್ಶನ ವರದಿ  

ಹಾವೇರಿ, ಆ. 28: ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.  ಈ ಸಂದರ್ಭದಲ್ಲಿ ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಲಾಯಿತು.  

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಅಪರ ಜಿಲ್ಲಾಧಿಕಾರಿ ನಾಗರಾಜ ಎಲ್‌. ಅವರು ಪುಷ್ಪಾರ್ಚನೆ ನೆರವೇರಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.