ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ಶ್ರೀ ವಿಶ್ವಕರ್ಮ ಜಯಂತಿ ಆಚರಣೆ  Celebration of Sri Vishwakarma Jayanti

ಲೋಕದರ್ಶನ ವರದಿ 

ಕಾರವಾರ 17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನ್ಯೂ ಹೈಸ್ಕೂಲ್ ಬಾಡ ಕಾರವಾರದಲ್ಲಿ   ವಿಶ್ವಕರ್ಮ ಜಯಂತಿಯನ್ನು ಗುರುವಾರ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅವರ ಕುರಿತು ಗದಗ ಜಿಲ್ಲೆಯ ಕೂಟುಮಚಗಿ ತಾಲೂಕಿನ ಅರಿವು ಕೇಂದ್ರದ ಗ್ರಂಥಪಾಲಕ ಸೂರ್ಯನಾರಾಯಣ ಈಶಪ್ಪಢ ಪತ್ತಾರ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು.   

ಕಾರ್ಯಕ್ರಮದಲ್ಲಿ ನ್ಯೂ ಹೈಸ್ಕೂಲ್ ಮುಖ್ಯ ಶಿಕ್ಷಕ ರಾಜೇಶ್ ಶೆಣ್ವಿ, ವಿಶ್ವಕರ್ಮ ಮಹಾ ಒಕ್ಕೂಟ ಬೆಂಗಳೂರು ವಿಭಾಗೀಯ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಗೋಪಾಲ ಆಚಾರ್ಯ, ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಖೈರುನಿಸಾ, ಸಮುದಾಯದವರು, ಉಪನ್ಯಾಶಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಕೃಷ್ಣಮೂರ್ತಿ ಶಿವು ಹುಳಸೆಮಕ್ಕಿ ನಿರೂಪಿಸಿದ, ವಂದಿಸಿದರು.