ಜ.26ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ

ಜನವರಿ 26 ರಂದು -ಹಾವೇರಿ: ಜಿಲ್ಲಾಡಳಿತದಿಂದ ಜನವರಿ 26 ರಂದು ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಅಧಿಕಾರಿಗಳು ಸಿದ್ಧತೆಗಳನ್ನು ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು, ಸ್ಥಬ್ಧಚಿತ್ರ ಮೆರವಣಿಗೆ, ಸಾಧಕರಿಗೆ ಸನ್ಮಾನ ಒಳಗೊಂಡಂತೆ ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಷ್ಟ್ರಧ್ವಜಾರೋಹಣದಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆಯಿಂದ ಧ್ವಜಾರೋಹಣ ವ್ಯವಸ್ಥೆಕೈಗೊಳ್ಳಬೇಕು. ಪಥಸಂಚಲನಕ್ಕೆ ಪೊಲೀಸ್, ಹೋಂಗಾಡರ್್, ಎನ್.ಸಿ.ಸಿ., ಶಾಲಾ-ಕಾಲೇಜು ವಿದ್ಯಾಥರ್ಿಗಳು ಸೇರಿದಂತೆ ವ್ಯವಸ್ಥಿತವಾಗಿ ತರಬೇತಿ ನೀಡಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗೆ ಮತ್ತು ವಿದ್ಯಾಥರ್ಿಗಳಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾದ ಆಸನದ ವ್ಯವಸ್ಥೆ, ಮೈಲಾರ ಮಹದೇವಪ್ಪ ವೃತ್ತದಿಂದ ಶಿಸ್ತುಬದ್ಧ ಮೆರವಣಿಗೆ, ದೇಶಪ್ರೇಮ, ನಾಡ ಪ್ರೇಮದ ಉತ್ಸಾಹ ಬಿಂಬಿಸುವ ಗೀತೆಗಳಿಗೆ ನೃತ್ಯ ಸಂಯೋಜನೆ, ಶಾಲಾ-ಕಾಲೇಜು ಹಾಗೂ ಜವಾಹರ ನವೋದಯ, ಕೇಂದ್ರೀಯ ವಿದ್ಯಾಲಯ, ಮೊರಾಜರ್ಿ ವಸತಿ ನಿಲಯ ವಿದ್ಯಾಥರ್ಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚಿಸಿದರು. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಯಿತು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ ಅವರು ಮಾತನಾಡಿ, ಶಾಲಾ-ಕಾಲೇಜು ಹಾಗೂ ವಿವಿಧ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಸಂದರ್ಭದಲ್ಲಿ ಯಾವುದೇ ಲೋಪವಾಗಬರಾದು. ಸಂಜೆ ನಿಗಧಿತ ಅವಧಿಯೊಳಗೆ ರಾಷ್ಟ್ರಧ್ವಜವನ್ನು ಇಳಿಸಬೇಕು. 

  ರಾಷ್ಟ್ರಧ್ವಜಕ್ಕೆ ಯಾವುದೇ ಅಗೌರವ ಆಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು . ಈ ಕುರಿತಂತೆ ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿದರ್ೆಶನ ನೀಡಲು ತಿಳಿಸಿದರು. 

  ಸಭೆಯ ನಡಾವಳಿ ಕುರಿತಂತೆ ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ ವಿವರಿಸಿದರು.  ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ವಾತರ್ಾಧಿಕಾರಿ ಬಿ.ಆರ್.ರಂಗನಾಥ್,  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದಕುಮಾರ ಹೆಗ್ಗಳಗಿ, ಜಿ.ಪಂ.ಸಹಾಯಕ ಕಾರ್ಯದಶರ್ಿ ಜಾಫರ ಸುತಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜಮಖಾನೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೀವ ಕೂಲೇರ,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗುಡ್ಡಪ್ಪ, ಪೌರಾಯುಕ್ತ ಬಸವರಾಜ ಜಿದ್ದಿ, ಅಗ್ನಿಶಾಮ ಇಲಾಖೆ ಅಧಿಕಾರಿ ಸೋಮಶೇಖರ ಅಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಪೊಲೀಸ್ ಆರ್.ಟಿ.ಓ. ಅಧಿಕಾರಿಗಳು ಉಪಸ್ಥಿತರಿದ್ದರು.