ವಚನ ಪಿತಾಮಹ ಡಾ. ಫ. ಗ. ಹಲಕಟ್ಟಿ ಜಯಂತಿ ಆಚರಣೆ: ವಚನ ಸಾಹಿತ್ಯ ಸಂರಕ್ಷಣೆಗೆ ಒತ್ತು

ವಚನ ಪಿತಾಮಹ ಡಾ. ಫ. ಗ. ಹಲಕಟ್ಟಿ ಜಯಂತಿ ಆಚರಣೆ: ವಚನ ಸಾಹಿತ್ಯ ಸಂರಕ್ಷಣೆಗೆ ಒತ್ತು  Celebration of the Birth Anniversary of 'Vachana Pitamaha' Dr. P.G. Halakatti: Emphasis on Preservin

ವಿಜಯಪುರ 02:  ನಗರದ ಬಿಎಲ್ಡಿಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ವಚನ ಪಿತಾಮಹ ಡಾ. ಫ. ಗ. ಹಲಕಟ್ಟಿ ಅವರ ಜಯಂತಿಯನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಡಾ. ಫ. ಗ. ಹಲಕಟ್ಟಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಎಲ್ಡಿಇ ಡೀಮ್ಡ್‌ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು, ಹಲಕಟ್ಟಿ ಅವರು ಸ್ಥಾಪಿಸಿದ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದು, ಈ ಭಾಗದ ಜನರಿಗೆ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿದೆ ಎಂದು ಹೇಳಿದರು.  

ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಎಸ್‌. ಎಸ್‌. ದೇವರಮಣಿ, ಡೀನ್ ಅಲೈಡ್ ಹೆಲ್ತ್‌ ಸೈನ್ಸ್‌ ಡಾ. ಎಸ್‌. ವಿ. ಪಾಟೀಲ್, ಹಣಕಾಸು ಅಧಿಕಾರಿ ಬಿ. ಎಸ್‌. ಪಾಟೀಲ್, ಉಪಕುಲಸಚಿವ ಸತೀಶ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.  ವಚನ ಸಾಹಿತ್ಯದ ಸಂರಕ್ಷಣೆ ಹಾಗೂ ವಚನ ಪಿತಾಮಹರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.