ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ
Celebration of the Jayanti of the saint poet Sarvajna
ಲೋಕದರ್ಶನ ವರದಿ
ವಿಜಯಪುರ 20: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.20 ಶುಕ್ರವಾರದಂದು ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿರುವ ಸರ್ವಜ್ಞರು ತ್ರಿಪದಿ ಕಾವ್ಯದ ಮೂಲಕ ಜನಪ್ರಿಯರಾದ ಕವಿ-ತತ್ತ್ವಜ್ಞರು ಅವರು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಳ, ಸುಗಮ ಮತ್ತು ತತ್ವಪೂರ್ಣವಾದ ತ್ರಿಪದಿಗಳನ್ನು ರಚಿಸಿದರು. ಸರ್ವಜ್ಞರು ತಮ್ಮ ಕಾಲದ ಸಾಮಾಜಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಬದುಕಿನ ಎಲ್ಲ ವಿಷಯಗಳನ್ನೂ ಸ್ಪರ್ಶಿಸಿದ್ದಾರೆ. ಈ ಕಾರಣದಿಂದ ಅವರನ್ನು ಜನಕವಿ ಎಂದೂ ಕರೆಯಲಾಗುತ್ತದೆ.ಸರ್ವಜ್ಞ ನಡೆದು ಬಂದ ದಾರಿ ಅವರ ಆದರ್ಶಗಳನ್ನ ಮೈಗೂಡಿಸಿಕೊಂಡು ಸಾಗಬೇಕಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರು ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಟಿ.ವ್ಹಿ ಶೆಟ್ಟಿ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 