ಕಲ್ಯಾಣ ಕರ್ನಾಟಕ ವಿಮೋಚನಾ ಉತ್ಸವ ಆಚರಣೆ
Celebration of the Kalyana Karnataka Liberation Festival
ಲೋಕದರ್ಶನ ವರದಿ
ಹೂವಿನಹಡಗಲಿ 17: ಪಟ್ಟಣದ ತಾಲೂ ಆಡಳಿತ ಸೇರಿದಂತೆ ತಾಲೂಕಿನಲ್ಲಿ ಶಾಲಾ-ಕಾಲೇಜು, ಮತ್ತು ಸರ್ಕಾರಿ ನಾನಾ ಕಚೇರಿಯಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ವಿಮೋಚನಾ ಉತ್ಸವ ಆಚರಣೆ ಮಾಡಲಾಯಿತು.ಪುರಸಭೆಯಲ್ಲಿ ಶಾಸಕ ಕೃಷ್ಣನಾಯಕ ಧ್ವಜಾರೋಹಣ ನೆರವೇರಿಸಿದರು.ನಂತರ ಮಾತನಾಡಿ ಹೈದರಾಬಾದ್ ಕರ್ನಾಟಕಕ್ಕೆ ’ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಪುನರ್ ನಾಮಕರಣ ಮಾಡಿದ್ದು, ’ಹೈ.ಕ. ವಿಮೋಚನಾ ದಿನ’ದ ಬದಲಾಗಿ ’ಕಲ್ಯಾಣ ಕರ್ನಾಟಕ ಉತ್ಸವ ದಿನ’ ಆಚರಿಸಲಾಗುತ್ತಿದೆ ಎಂದರು. 1948ರ ಸೆಪ್ಟೆಂಬರ್ 17ರಂದು ಈ ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟದಲ್ಲಿ ವೀಲೀನವಾಯಿತು. ಈ ಭಾಗದ ಜಿಲ್ಲೆಗಳು ಕರ್ನಾಟಕದ ಭಾಗವಾದವು. ಅಂದಿನಿಂದ ಪ್ರತಿ ವರ್ಷ ಸೆ.17ನ್ನು ’ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿದೆ ಎಂದರು. ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ, ಎಂಜಿನಿಯರ್ ಸೋಮಶೇಖರ ಮತ್ತು ಸಿಬ್ಬಂದಿ ವರ್ಗ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 