ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ಆಚರಣೆ

Celebration of the birth anniversary of the great orator Allama Prabhu

ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ಆಚರಣೆ 

ಹುಬ್ಬಳ್ಳಿ 10: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ 12ನೇ ಶತಮಾನದ ಅನುಭವ ಮಂಟಪದ ಅಧ್ಯಕ್ಷ, ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ನಿಮಿತ್ ಭಕ್ತಿ, ಜ್ಞಾನ, ವೈರಾಗ್ಯದಿಂದ ಒಳಗೊಂಡ ನೀರಾಕಾರ, ಘನ ಚೈತನ್ಯ, ಸುಜ್ಞಾನಿ ಅಲ್ಲಮಪ್ರಭುಗಳು ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ​‍್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು.  

ಬಸವ ಪರಿಸರ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಪ್ರೊ ಎಸ್‌.ವಿ.ಪಟ್ಟಣಶೆಟ್ಟಿ, ಬಸವಕೇಂದ್ರದ ಕಾರ್ಯದರ್ಶಿ ಡಾ. ಪ್ರಕಾಶ ಮುನ್ನೋಳಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಇದ್ದರು.