ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ .
Celebration of the birth anniversary of the saint poet Sarvajna.
ಲೋಕದರ್ಶನ ವರದಿ
ಕಾರವಾರ, ಫೆ.20 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಶ್ರೀ ಸಂತ ಕವಿ ಸರ್ವಜ್ಞ ಜಯಂತಿಯನ್ನು ಸರ್ವಜ್ಞನ ಭಾವ ಚಿತ್ರಕ್ಕೆ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರರು ಪ್ರಮೋದ ನಾಯ್ಕ ಮಾತನಾಡಿ, ಸರ್ವಜ್ಞ 16 ನೇ ಶತಮಾನದ ಸಾಲಿನ ದಾರ್ಶನಿಕ ಕವಿಯಾಗಿದ್ದು, ಸಮಾಜದ ಅಂಕುಡೊಂಕುಗಳನ್ನು ತ್ರಿಪದಿಗಳ ಮೂಲಕ ತಿದ್ದಿದರು, ಕನ್ನಡ ಸಾಹಿತ್ಯಕ್ಕೆ ತ್ರಿಪದಿಗಳ ಕೊಡುಗೆ ಅಮೂಲ್ಯವಾಗಿದ್ದು, ಇವರು ತ್ರಿಪದಿಗಳ ಬ್ರಹ್ಮ ಎಂದು ಪ್ರಸಿದ್ಧಿ ಪಡೆದಿದ್ದು, ಸರ್ವಜ್ಞನ ತ್ರಿಪದಿಗಳು ಸರ್ವಕಾಲಕ್ಕೂ ಪ್ರಸ್ತುತ ಎಂದರು.
ಶ್ರೀ ಸಂತ ಕವಿ ಸರ್ವಜ್ಞರ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ವಿಪತ್ತು ನಿರ್ವಹಣೆ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ ಎಸ್.ಹೆಚ್ ವಿಶೇಷ ಉಪನ್ಯಾಸ ನೀಡಿ, ಸರ್ವಜ್ಞರ ಮೂಲ ಹೆಸರು ಪುಷ್ಪದತ್ತ, ಕನ್ನಡ ಸಾಹಿತ್ಯದ ಸ್ವಾರಸ್ವತ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿದ ತ್ರಿಪದಿಗಳ ಚಕ್ರವರ್ತಿ ಸರ್ವಜ್ಞ, ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಓರೆ ಕೋರೆಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ. ಸರ್ವಜ್ಞರು 7070 ತ್ರಿಪದಿಗಳನ್ನು ರಚಿಸಿದ್ದಾರೆ ಎಂದು ದಾಖಲೆ ಪ್ರಕಾರ ತಿಳಿದು ಬಂದಿದೆ ಎಂದರು.
ಸರ್ವಜ್ಙರು ಲೋಕ ಕಲ್ಯಾಣಕ್ಕಾಗಿ, ಅನುಭವಕ್ಕಾಗಿ ಲೋಕ ಸಂಚಾರ ಮಾಡುತ್ತಾ ಜನರೊಂದಿಗೆ ಬೆರೆತು ಸಮಾಜದಲ್ಲಿನ ವಾಸ್ತವವನ್ನು ಅರಿತು, ಸರಳ ಭಾಷೆಯಲ್ಲಿ ವಾಸ್ತವಿಕ, ಸಾಹಿತ್ಯ, ಜಾತಿ ಪದ್ದತಿ ವಿರೋಧ, ಜೀವನದ ನೆಮ್ಮದಿಯ, ಸೋಮಾರಿತನ ತೊಲಗಿಸುವ, ಸಂಬಂಧ ವಾಸ್ತವಗಳ ಚಿತ್ರಣ, ಶಿವೈಕ್ಯದ ತ್ರಿಪದಿಗಳನ್ನು ರಚಿಸಿ ಸಮಾಜದಲ್ಲಿನ ಸಮಸ್ಯೆಗಳನ್ನು ನಿರ್ಮೂಲನೆ ಮಾಡಲು ಪ್ರಯತ್ನಿಸಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಡಾ. ಮಹೇಂದ್ರ ಕುಮಾರ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ಭೌತಶಸ್ತ್ರ ವಿಭಾಗದ ಸಹಾಯಕ ಪ್ರಾದ್ಯಾಪಕಿ ಡಾ. ಮುನಿರತ್ನಮ್ಮ ಎಲ್.ಎಂ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 