ವಚನಕಾರ ಡಾ.ಮಹದೇವ ಬಣಕಾರರ ಹುಟ್ಟು ಹಬ್ಬ ಆಚರಣೆ
Celebration of the birthday of the poet Dr. Mahadeva Banakara
ಹಾವೇರಿ 04: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಆಧುನಿಕ ವಚನಕಾರ ದಿ.ಡಾ.ಮಹದೇವ ಬಣಕಾರರ 93ನೇ ಹುಟ್ಟುಹಬ್ಬವನ್ನು ಡಾ. ಮಹದೇವ ಬಣಕಾರ ರಾಷ್ಟ್ರೀಯ ಸ್ಮಾರಕ ಸಮಿತಿ ವತಿಯಿಂದ ಆಚರಿಸಲಾಯಿತು.ಸ್ಮಾರಕ ಸಮಿತಿಯ ಅಧ್ಯಕ್ಷರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್.ಗಾಜಿಗೌಡ್ರ ಅವರು ಡಾ.ಮಹದೇವ ಬಣಕಾರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಸ್ಮಾರಕ ಸಮಿತಿಯ ಅಧ್ಯಕ್ಷರಾದ ಎಸ್.ಎಫ್.ಎನ್.ಗಾಜಿಗೌಡ್ರ ಮಾತನಾಡಿ ಡಾ. ಮಹದೇವ ಬಣಕಾರ ರಾಷ್ಟ್ರೀಯ ಸ್ಮಾರಕ ಸಮಿತಿ ಹುಟ್ಟು ಹಾಕಿ ಬಣಕಾರರ ಹೆಸರು ಅಜರಾಮರವಾಗಿ ಉಳಿಯಲಿ.ಹಾವೇರಿ ನಗರದ ಜನತೆಗೆ ಉಪಯೋಗವಾಗಲಿ ಎನ್ನುವ ಉದ್ದೇಶದಿಂದ ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನ ನಿರ್ಮಾಣಮಾಡಲಾಗುತ್ತಿದೆ.ಇನ್ನೇನು ಕಟ್ಟಡ ಅಂತಿಮ ಸ್ಪರ್ಶ ಪಡೆದುಕೊಂಡು ಲೋಕಾರೆ್ಣಯಾಗುವ ಹಂತಕ್ಕೆ ಬಂದು ತಲುಪಿದೆ.ಇದು ನಮ್ಮೆಲ್ಲರಿಗೂ ಸಂತೋಷದ ವಿಷಯವಾಗಿದೆ ಎಂದರು.ಈ ಸಂದರ್ಭಲ್ಲಿ ಹಿರಿಯರಾರದ ಎಮ್.ಎಸ್.ಕೋರಿಶೆಟ್ಟರ,ವಾಯ್.ಬಿ.ಆಲದಕಟ್ಟಿ,ಪರಮೇಶ ಶಿವಣ್ಣನವರ,ಅಬ್ದುಲ್ ಹುಬ್ಬಳ್ಳಿ, ವೀರಣ್ಣ ಬೆಳವಡಿ,ಪ್ರಾಧಿಕಾರದ ಆಯುಕ್ತ ವೀರಮಲ್ಲಪ್ಪ ಪೂಜಾರ ಮತ್ತಿತರರು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 