ಕುಲಪುರೋಹಿತ ಆಲೂರು ವೆಂಕಟರಾವ್ ಜನ್ಮದಿನಾಚರಣೆ ಸಂಭ್ರಮ

ಕುಲಪುರೋಹಿತ ಆಲೂರು ವೆಂಕಟರಾವ್ ಜನ್ಮದಿನಾಚರಣೆ ಸಂಭ್ರಮ Celebrations marking the birth anniversary of Kulapurohita Alur Venkatarao

ಲೋಕದರ್ಶನ ವರದಿ 

     ಹುಬ್ಬಳ್ಳಿ, ಜುಲೈ 13: ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಅವರ 146ನೇ ಜನ್ಮದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿರುವ ಅವರ ಪುತ್ಥಳಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಮಾಲಾರೆ​‍್ಣ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಅಧ್ಯಕ್ಷರು, ಸಮಾಜಮುಖಿ ಚಿಂತಕರು, ಬಸವತತ್ವ ಪ್ರಚಾರಕರು ಹಾಗೂ ಶರಣ ಸಾಹಿತಿ ರಂಜಾನ್ ದರ್ಗಾ ಅವರನ್ನು ಸಮಿತಿಗಳ ವತಿಯಿಂದ ಶಾಲು ಹೊದಿಸಿ, ಮಾಲಾರೆ​‍್ಣ ಮಾಡಿ ಗೌರವಿಸಲಾಯಿತು. ಬಳಿಕ ಅವರ ಆಶೀರ್ವಾದ ಪಡೆಯಲಾಯಿತು.  

ಕಾರ್ಯಕ್ರಮದಲ್ಲಿ ಟ್ರಸ್ಟ್‌ ಸದಸ್ಯ ಸಿ. ಯು. ಬೆಳ್ಳಕ್ಕಿ, ರಂಗಭೂಮಿ ಕಲಾವಿದ ಬಸವರಾಜ್ ಬೆಂಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಗ್ರಂಥಪಾಲಕ ಮಾರುತಿ ತಳಗೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಗೂ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ಸುರೇಶ ಡಿ. ಹೊರಕೇರಿ, ಪ್ರೊ. ಎಸ್‌. ಆರ್‌. ಆಶಿ, ಬಿ. ಎಸ್‌. ಸೊಪ್ಪಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ಕನ್ನಡದ ಕುಲಪುರೋಹಿತರೆಂದು ಖ್ಯಾತಿ ಪಡೆದ ಆಲೂರು ವೆಂಕಟರಾವ್ ಅವರು 1880ರ ಜುಲೈ 12ರಂದು ವಿಜಯಪುರದಲ್ಲಿ ಜನಿಸಿದರು. ಇತಿಹಾಸಕಾರ, ಲೇಖಕ ಹಾಗೂ ಪತ್ರಕರ್ತರಾಗಿದ್ದ ಅವರು ಚದುರಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಕರ್ನಾಟಕ ಏಕೀಕರಣ ಚಳುವಳಿಗೆ ಮುನ್ನಡೆ ನೀಡಿ ರಾಜ್ಯ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.