ಟಿ.ಎನ್. ಶೇಷನ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ನ 11 :    ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.    ಶೇಷನ್ ಅವರು ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ ದಿಟ್ಟ ವ್ಯಕ್ತಿ . ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಯಡಿಯೂರಪ್ಪ ಹೇಳಿದ್ದಾರೆ.    ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧುವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.