ಜನಗಣತಿ 2026: ಶಿಕ್ಷಕರಿಗೆ ಸಂಭಾವನೆ, ಹಾಜರಾತಿ ಪ್ರಮಾಣ ಪತ್ರ ನೀಡಲು ಮನವಿ
Census 2026: Request for remuneration and attendance certificates for teachers
ಕಂಪ್ಲಿ 01: ಜನಗಣತಿ 2026ರ ಮನೆಪಟ್ಟಿ ಕಾರ್ಯದಲ್ಲಿ ಪಾಲ್ಗೊಂಡ ಕಂಪ್ಲಿ ನಗರದ ಶಿಕ್ಷಕರಿಗೆ ಸಂಭಾವನೆ ಹಾಗೂ ಹಾಜರಾತಿ ಪ್ರಮಾಣ ಪತ್ರವನ್ನು ಶೀಘ್ರ ನೀಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂಘದ ತಾಲೂಕು ಅಧ್ಯಕ್ಷ ವಿ. ವಸಂತ್ ಮಾತನಾಡಿ, ಜನಗಣತಿ ಮನೆಪಟ್ಟಿ ಕಾರ್ಯ ಮುಗಿದು ಹಲವು ತಿಂಗಳು ಕಳೆದಿದ್ದರೂ, ನಗರದಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಇನ್ನೂ ಸಂಭಾವನೆ ಮತ್ತು ಹಾಜರಾತಿ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಶಿಕ್ಷಕರಿಗೆ ತೊಂದರೆಯಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಪುರಸಭೆ ಮುಖ್ಯಾಧಿಕಾರಿ ಗೈರು ಹಾಜರಿಯಲ್ಲಿ, ಕಿರಿಯ ಅಭಿಯಂತರ ತೇಜಸ್ವಿನಿ ಅವರು ಮನವಿ ಸ್ವೀಕರಿಸಿ, ವಿಷಯವನ್ನು ಮುಖ್ಯಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ನಾಗನಗೌಡ ಎಂ.ಎ., ತಾಲೂಕು ಗೌರವಾಧ್ಯಕ್ಷ ಚಂದ್ರಶೇಖರ ಶೆಟ್ರು ಸೇರಿದಂತೆ ಪದಾಧಿಕಾರಿಗಳಾದ ರೇವಣಸಿದ್ದೇಶ್, ಚಂದ್ರಯ್ಯ ಸೊಪ್ಪಿಮಠ, ಜೋಗಿ ರುದ್ರ್ಪ ನಾಯಕ, ಕಲೀಲ್ಶಂಕರ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 