ಅಧಿಕಾರ ವ್ಯಾಪ್ತಿ ಮೀರಿ ಜಾತಿಗಣತಿ : ಆಕ್ಷೇಪ
Census beyond Jurisdiction : Objection
ಹೂವಿನಹಡಗಲಿ 20 : ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ಸರಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಲವು ಸಮುದಾಯಗಳು ಹೈಕೋರ್ಟ್ ಮೊರೆ ಹೋಗಿದ್ದು, ಅಧಿಕಾರ ವ್ಯಾಪ್ತಿ ಮೀರಿ ಜಾತಿಗಣತಿ ನಡೆಸುತ್ತದೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ ಬಿ ಬಸವರಾಜ ಆರೋಪ ಮಾಡಿದರು.
ಈ ಬಗ್ಗೆ ಪತ್ರಿಕೆ ಹೇಳಿಕೆಯಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸ್ಥಿತಿಯನ್ನು ತಿಳಿಯಲು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸೋಮವಾರ ಗಣತಿ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದರುಗಣತಿ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ರಾಜ್ಯ ಸರಕಾರ ಜನರ ಜನರಲ್ಲಿ ಜಾತಿ ಬೀಜ ಬಿತ್ತಿ ಒಡೆದಾಳುವ ನೀತಿ ಅನುಸರಿಸಲು ಹೊರಟಿದೆ.ರಾಜ್ಯದಲ್ಲಿ 1500ಕ್ಕೂ ಹೆಚ್ಚಿನ ಜಾತಿಗಳ ವರ್ಗಿಕರಣದಲ್ಲಿ ಗೊಂದಲ ಇದೆ ಮತ್ತು ಅಸ್ಥಿತ್ವ ಇಲ್ಲದ ಹಲವು ಉಪ ಜಾತಿಗಳ ಸೃಷ್ಟಿ ಮಾಡಲಾಗುತ್ತಿದೆ.ಗೊಂದಲ ಗೂಡಾಗಿರುವ ಜಾತಿ ಗಣತಿ ಕಾರ್ಯಕ್ಕೆ ವಿವಿಧ ಜಾತಿಯ ಸಂಘಟನೆಗಳು, ಹಿರಿಯ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ರಾಜ್ಯ ಸರ್ಕಾರದ ಈ ದುಡುಕಿನ ನಿರ್ಧಾರ ಸರಿಯಲ್ಲ.ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಜನರಿಗೆ ಸಾಲದ ಭರೆ ಎಳೆದು ಅಭಿವೃದ್ಧಿ ಜಪ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ. ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ಜನರ ಮನಸ್ಸನ್ನು ಬೇರೆ ಕಡೆ ಸೆಳೆಯುವ ಕೆಲಸ ಮಾಡುತ್ತಿದೆ.ಮುಂಬರುವ ತಾಲೂಕು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ. ಎಂದು ಎಂ ಬಿ ಬಸವರಾಜ ರಾಜ್ಯ ಸರ್ಕಾರ ವಿರುದ್ಧ ಹರಿಹಾಯ್ದದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 