8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಸಭೆ ಅಸ್ತು
Central Cabinet meeting to form 8th Pay Commission
ನವದೆಹಲಿ 16: ಕೇಂದ್ರ ಸರ್ಕಾರಿ ನೌಕರರ 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಸಭೆ ಅಸ್ತು ಎಂದಿದೆ.
ಹೌದು.. ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದ್ದು, ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಸಚಿವ ವೈಷ್ಣವ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನ ಮಂತ್ರಿಗಳು 8ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು. ಪ್ರಸ್ತುತ 49 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರಿದ್ದಾರೆ.
2025ರಲ್ಲಿ ಹೊಸ ವೇತನ ಆಯೋಗವನ್ನು ಸ್ಥಾಪಿಸುವುದರಿಂದ 7ನೇ ವೇತನ ಸಮಿತಿಯ ಅವಧಿ ಪೂರ್ಣಗೊಳ್ಳುವ ಮೊದಲೇ ಅದರ ಶಿಫಾರಸುಗಳನ್ನು ಸ್ವೀಕರಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 