ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತ ವರದಿ: ಸತ್ಯಕ್ಕೆ ದೂರ ಸ್ಪಷ್ಟಣೆ

ನವದೆಹಲಿ, ಏ 19,ಕರೋನ  ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು,   ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವೇತನ(ಪಿಂಚಣಿ)ಯನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯಲ್ಲಿ ಯಾವುದೇ  ಸತ್ಯಾಂಶವಿಲ್ಲ  ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಸಚಿವಾಲಯ ಈ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ  ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ  ನಮ್ಮ ಮುಂದೆ ಇಲ್ಲ. ಎಂದೂ   ಸಚಿವಾಲಯ ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದೆ.  ಹಣಕಾಸು ಸಚಿವಾಲಯದ ಟ್ವೀಟ್ ಅನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಲೇ ಶೇರ್ ಮಾಡಿದ್ದಾರೆ. ಕರೋನ  ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು,  ನಿವೃತ್ತಿ ವೇತನ ನಿಲ್ಲಿಸುತ್ತಾರೆ, ಶೇ.20ರಷ್ಟು ಕಡಿತಗೊಳಿಸುತ್ತಾರೆ ಎಂಬ ಸುದ್ದಿ ಹಬ್ಬಿರುವುದರಿಂದ ನಿವೃತ್ತ ನೌಕರರು ಕಂಗಾಲಾಗಿದ್ದರು.