ನಿಟ್ ಪರೀಕ್ಷೆ, ಸುರಕ್ಷತೆ, ಗೌಪ್ಯತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲ.ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
Central government failed to maintain NIT exam safety and confidentiality. Demand for Education Mini
ರಾಣೆಬೆನ್ನೂರು 21: ನೀಟ್ ಪರೀಕ್ಷೆಯ ಸುರಕ್ಷತೆ ಮತ್ತು ಕಾಪಾಡಬೇಕಾದ ಗೌಪ್ಯತೆ ವಿಷಯವಾಗಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಅಲ್ಲದೆ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡುವಂತೆ ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ ಪರಿಷತ್ ಆಗ್ರಹಿಸಿದೆ. ಪ್ರಧಾನ ಹಂಚೆ ಕಚೇರಿ ಬಳಿ ಜಮಾಯಿಸಿದ ವಿದ್ಯಾರ್ಥಿ ವಿಕಾಸ್ ಪರಿಷತ್ ಕಾರ್ಯಕರ್ತರು, ಮುಖಂಡರು ಪ್ರಸ್ತುತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯು, ಭಾರತದ ವೈದ್ಯಕೀಯ ಈ ಕ್ಷಣ ವ್ಯವಸ್ಥೆಯ ಪಾವಿತ್ರ್ಯ ತೆ ಮತ್ತು ಅರ್ಹತಾ ಪರೀಕ್ಷೆಗಳ ವಿಶ್ವಾಸಾರ್ಹತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವರ್ಷಗಳ ಕಾಲ ಕಷ್ಟಪಟ್ಟು ಓದುವ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಭಾರಿ ಅನ್ಯಾಯವಾಗಿದೆ ಎಂದು ಕಿಡಿ ಕಾರಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ಭಾರಿಗಾತ್ರದ ಸುದ್ದಿ ಹಬ್ಬಿದ್ದು, ಈ ಗುರುತು ಸಿಬಿಐ ಸಹ ಇದರಿಂದಾಗಿ ಈ ಕುರಿತು ಸೂಕ್ತ ತನಿಖೆಯಾಗಬೇಕು ಇದರಲ್ಲಿ ಪಾಲ್ಗೊಂಡ ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ ಪಾಟೀಲ್ ಅವರು ಸಿಬಿಐ ತನಿಖೆ ನಡೆಸುತ್ತಿದೆ. ಇಂತಹ ಬೃಹ ಪ್ರಗರಣಗಳಿಂದಾಗಿ ಪರೀಕ್ಷೆಗಳನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸುವ ಅನಿವಾರ್ಯತೆ ಎದುರಾಗಿರುವುದು ಕೇಂದ್ರ ಸರ್ಕಾರದ ನಿರ್ಲಕ್ಷತನ್ನೂ ಎತ್ತಿ ತೋರಿಸುತ್ತಿದೆ ಕೋಟಿ ಕೋಟಿ ಕನಸುಗಳನ್ನು ಕಟ್ಟಿಕೊಂಡು ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ವ್ಯಾಸಂಗ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸಿಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ನೀಡಿದಂತಾಗಿದೆ ಎಂದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ದೇಶವೇ ತಲೆ ತಗ್ಗಿಸುವಂಥಾಗಿದೆ. ನಿಟ್ ಪ್ರಶ್ನೆ ಪತ್ರಿಕೆ ಸೋರಿಕೆಇಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳಿಗೆ ತಿರ್ವ್ ಅನ್ಯಾಯವಾಗುತ್ತದೆ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳು ಅರ್ಹತೆ ಕಳೆದುಕೊಳ್ಳುವ ಭೀತಿಯನ್ನು ಎದುರಿಸಬೇಕಾಗಿದೆ. ಇಂತಹ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಎನ್. ಟಿ. ಎ ರಾಷ್ಟ್ರೀಯ ಪರೀಕ್ಷಾ ಸಮಿತಿಯನ್ನು ರದ್ದುಗೊಳಿಸಬೇಕು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಬೇಕು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಪಿಯಾದ ನೈತಿಕ ಹೊಣೆ ಹೊತ್ತು ದೇಶದ ಭೆಷರತ್ ಕ್ಷಮೆಯಾಚಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ರಾಜೀನಾಮೆ ನೀಡಬೇಕು.
ಮತ್ತು ನೀಟ್ ಪತ್ರಿಕೆ ಸೋರಿಕೆಗೆ ಕಾರಣರಾದ ದುಷ್ಕರ್ಮಿಗಳನ್ನು ಗಲ್ಲೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿ ವಿಕಾಸ್ ಪರಿಷತ್ತಿನ ನೂರಾರು ಕಾರ್ಯಕರ್ತರು ಮೇಣದ ದೀಪ ಬೆಳಗಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮಾನವ ಸರಪಳಿ ನಿರ್ಮಿಸಿದರು ಅಲ್ಲದೆ ಇಂದಿನಿಂದ ಬರೆಯುವ ನೀಟ್ ಪರೀಕ್ಷಾರ್ಥಿಗಳಿಗೆ ಶುಭ ಕೋರಿದರು. ಮುಂಚೊಣಿಯಲ್ಲಿ ಮುಖಂಡರಾದ ಚಂದ್ರ್ಪ ಬೇಡರ,ಹರಿಹರ ಗೌಡ ಪಾಟೀಲ್ ಜಗದೀಶ್ ಕೇರೋಡಿ, ಹನುಮಂತಪ್ಪ ಕಬ್ಬಾರ್, ರಾಜು ಓಲೆಕಾರ್ ರವಿ ಕೆರೋಡಿ, ನಾಗರಾಜ ಹಾರೊಗೊಪ್ಪ, ಅಣ್ಣಪ್ಪ ದಾಸಪ್ಪನವರ, ಎಲ್ಲಪ್ಪ ಚಿಕ್ಕಣ್ಣನವರ, ಮಂಜಪ್ಪ ಗಳಗನಾಥ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 