ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ
Central government takes necessary steps for supply of cooking gas cylinders
ಬೆಳಗಾವಿ 11: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮದಿಂದ ಪೂರೈಕೆಯಲ್ಲಿ ವ್ಯತ್ಯಯವಾದರೂ ಅದನ್ನೆಲ್ಲ ಕೇಂದ್ರ ಸರ್ಕಾರ್ ಸರಿಪಡಿಸುತ್ತಿದೆ. ಇದೆಲ್ಲ ಗೊತ್ತಿದ್ದೂ ಕೆಲ ಕಾಂಗ್ರೆಸ್‌ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. ಇದು ಕಾಂಗ್ರೆಸ್‌ನವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತಿದೆ ಎಂದು ಮಾಜಿಶಾಸಕ ಬೆಳಗಾವಿ ವಿಭಾಗ ಪ್ರಭಾರಿ ಸಂಜಯ ಪಾಟೀಲ ಅವರು ತಿಳಿಸಿದರು.
ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಾಖಲೆಯ ಬಜೆಟ್ ಮಂಡಿಸಿದರು. ಆದರೆ ರಾಜ್ಯದ ಪರಿಸ್ಥಿತಿ ಎಲ್ಲಿಗೆ ಬಂದು ಮುಟ್ಟಿದೆ ಎಂದರೆ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗೆ ವೇತನ ಕೊಡಲೂ ಸಾಧ್ಯವಾಗಿಲ್ಲ. ಕಳೆದ ಫೆಬ್ರುವರಿ ತಿಂಗಳ ವೇತನವನ್ನೇ ನೀಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಯಾವುದು ಇಲ್ಲಾ. ದಾಖಲೆಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಸುವರ್ಣ ಅವಕಾಶ ಇತ್ತು. ಆದರೆ ಅವರು ಅದನ್ನು ಬಳಸಿಕೊಳ್ಳಲಿಲ್ಲ. ಎಲ್ಲವನ್ನೂ ಕೈಚೆಲ್ಲಿ ಕೂತಿದ್ದಾರೆ.
ಯುದ್ಧ ಆರಂಭವಾಗುತ್ತೆ ಎಂದು ಯಾರಿಗೂ ಮೊದಲೇ ಗೊತ್ತಿರಲಿಲ್ಲ. ದಿಢೀರ್ ಆರಂಭವಾಗಿದ್ದರಿಂದ ಜಗತ್ತಿನಾದ್ಯಂತ ಸಮಸ್ಯೆಗಳು ಶುರುವಾಗಿವೆ. ಇಂತಹ ಕನಿಷ್ಠ ತಿಳಿವಳಿಕೆ ಸಹ ಕಾಂಗ್ರೆಸ್‌ನವರಿಗೆ ಇಲ್ಲವಾಗಿದೆ. ಅಡುಗೆ ಅನಿಲ ಸಮಸ್ಯೆಯನ್ನೆ ಉಲ್ಬನ ಮಾಡಿದ್ದಾರೆ. ಯುದ್ಧದ ಸಾಧಕ ಬಾಧಕಗಳ ಬಗ್ಗೆ ಕೇಂದ್ರ ಸರ್ಕಾರ ಪರೀಶೀಲನೆ ನಡೆಸುತ್ತಿದೆ. ಯಾವುದೇ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಇದೆ ಸದನದಲ್ಲಿ ಸತ್ಯಕ್ಕೆ ಸಮೀಪದ ಉತ್ತರ ನೀಡಿರುವ ಸಚಿವ ಮುನಿಯಪ್ಪನವರ ಹತ್ತಿರ ಮಾಹಿತಿ ಪಡೆದುಕೊಳ್ಳಲಿ ಎಂದಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 