ಮಹಾಂತೇಶಗೆ ಚೈತನ್ಯ ಶ್ರೀ ಪ್ರಶಸ್ತಿ

ಲೋಕದರ್ಶನ ವರದಿ

ಬೈಲಹೊಂಗಲ 22: ಬೆಳಗಾವಿಯ ಕೆಎಲ್ಇ ಆಯುರ್ವೇದ ಕಾಲೇಜಿನ ಶಾರೀರ ರಚನಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ, ಬೈಲಹೊಂಗಲಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ  ಡಾ.ಮಹಾಂತೇಶ ರಾಮಣ್ಣವರ ಅವರಿಗೆ ಬೆಂಗಳೂರಿನ ಹೊಸಕೆರೆಹಳ್ಳಿ ಗುಪ್ತಾ ಕಾಲೇಜಿನಲ್ಲಿ ನಡೆದ ಅಖಿಲ ಕರ್ನಾಟಕ ಬೆಳಕು ಸಾಹಿತ್ಯ ಸಮ್ಮೇಳನ 2019 ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಬೆಳಕು ಚೈತನ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

   ರಾಯಚೂರ ಜಿಲ್ಲೆಯ ಮಾನವಿಯ ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟನಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಗೌರವ ಅಧ್ಯಕ್ಷ ಅರಳಿ ನಾಗರಾಜ್, ಗಣ್ಯರು ನೀಡಿ ಗೌರವಿಸಿದರು.