ರವಿಚಂದ್ರನ್ ಪುತ್ರನ 'ಪ್ರಾರಂಭ' ಚಿತ್ರದ ಟೀಸರ್ ಗೆ ಚಾಲೆಂಜಿಂಗ್ ಸ್ಟಾರ್ ಧ್ವನಿ
ಬೆಂಗಳೂರು, ಆ 21 ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟೀಸರ್ ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿ ಶುಭ ಕೋರಿದ್ದಾರೆ. ಇದೇ 23ರಂದು ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ
ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಅಡಿಯಲ್ಲಿ, ಜಗದೀಶ್ ಕಲ್ಯಾಡಿ ನಿರ್ಮಿಸುತ್ತಿರುವ ಚಿತ್ರಕ್ಕೆ ಮನು ಕಲ್ಯಾಡಿ ನಿರ್ದೇಶನವಿದೆ ಪ್ರಾರಂಭ' ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಈ ಸಮಾಜಕ್ಕೆ ಅದರಲ್ಲೂ ವಿಶೇಷವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.
ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ 50 ದಿನಗಳ ಚಿತ್ರೀಕರಣ ಮುಗಿದಿದ್ದು, ಚಿತ್ರೀಕರಣ ನಂತರದ ಚಟುವಟಿಕೆಗಳೂ ಮುಕ್ತಾಯವಾಗಿದೆ
ಐದು ಹಾಡುಗಳಿದ್ದು, ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಸುರೇಶ್ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಳು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ, ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 