ಚಾಮಲಾಪೂರ: ಇಂದಿನಿಂದ ಜಾತ್ರಾ ಮಹೋತ್ಸವ ವಿವಿಧ ಕಾರ್ಯಕ್ರಮಗಳು
ಕೊಪ್ಪಳ: ತಾಲೂಕಿನ ಚಾಮಲಾಪೂರ ಗ್ರಾಮದ ಪವಾಡ ಪುರುಷ ಕರಿಬಸವೇಶ್ವರ ಗದ್ದಿಗೆಯಲ್ಲಿ ಮಹಾಶಿವರಾತ್ರಿ ಹಾಗೂ ಮಠದ 10ನೇ ವರ್ಷದ ಸಾಮೂಹಿಕ ವಿವಾಹಗಳು ಮತ್ತು ಜಾತ್ರಾ ಮಹೋತ್ಸವ ನಿಮಿತ್ಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ. ಫೆ. 26 ಬುಧವಾರದಂದು ಮಹಾಶಿವರಾತ್ರಿ ನಿಮಿತ್ಯ ಮಹಾರುದ್ರಭಿಷೇಕ, ಬಿಲ್ವಾರ್ಚನೆ, ಅಭಿಷೇಕ, ಭಜನೆ, ಕೀರ್ತನೆ ಕಾರ್ಯಕ್ರಮಗಳು ಜರುಗಲಿವೆ. ಫೆ. 27 ರಂದು ಬೆಳಿಗ್ಗೆ 8 ಗಂಟೆಗೆ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾವಳಿ ಜರುಗಲಿವೆ. 28 ರಂದು ಶ್ರೀಗಳ ತುಲಾಭಾರ, ಸಾಮೂಹಿಕ ವಿವಾಹಗಳು, ಕರಿಬಸವೇಶ್ವರ ಪೂರ್ವ ಪ್ರಥಮಿಕ ಶಾಲೆಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜೊತೆಗೆ ಗಜೇಂದ್ರಗಡ ಫೈವ್ ಸ್ಟಾರ್ ಮೆಲೋಡೀಸ್ ಆರ್ಕೆಷ್ಟ್ರಾ ಇವರಿಂದ ರಸಮಂಜರಿ ಕಾರ್ಯಕ್ರಮ ಹಾಗೂ ಗಂಗಾವತಿಯ ಬೀಚಿ ಪ್ರಾಣೇಶ, ಮಿಮಿಕ್ರಿ ರಾಜ ನರಸಿಂಹ ಜೋಶಿ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮಗಳಿವೆ. ಎಲ್ಲಾ ಕಾರ್ಯಕ್ರಮಗಳಿಗೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಕುದರಿಮೋತಿ ವಿಜಯಮಹಾಂತ ಮಹಾಸ್ವಾಮಿಗಳು, ಮದ್ದಾನೇಶ್ವರಮಠದ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮೈನಹಳ್ಳಿ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಧರಮುರಡಿ ಹಿರೇಮಠದ ರ್ಶರೀ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಇಟಗಿ ಭೂಕೈಲಾಸ ಮೇಲುಗದ್ದುಗೆಯ ಗುರು ಶಾಂತವೀರ ಶಿವಾಚಾರ್ಯ ಮಾಹಾಸ್ವಾಮಿಗಳು ಆಗಮಿಸುವರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಬೇಕು ಎಂದು ದೇವಸ್ಥಾನ ಸಮಿತಿ ಪ್ರಕಟಣೆ ನೀಡಿದೆ. ಹೆಚ್ಚಿನ ಮಾಹಿತಿ ಹಾಗೂ ಮದುವೆಗೆ ಹೆಸರು ನೊಂದಾಯಿಸಲು ಮೊ: 8550008654, 9019999041, 8073970053 ಇವರನ್ನು ಸಂಪರ್ಕಿಸಬಹುದು.