ಲೋಕದರ್ಶನ ವರದಿ
ಗೋಕಾಕ 19: ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಶುಕ್ರವಾರ ಜ.17 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ನೀಲಣ್ಣವರ, ಉಪಾಧ್ಯಕ್ಷರಾಗಿ ಧರೆಪ್ಪ ಚಂದರಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಗ್ರಾಮದ ಪಿಕೆಪಿಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಗೊಂಡ ಚುನಾಯಿತ ಅಭ್ಯಥರ್ಿಗಳಿಗೆ ಪ್ರಮಾಣ ಪತ್ರಗಳನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.
ಸಂಘದ ಕಳೆದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಸಂಘದ ಪರವಾಗಿ ಶಾಲು ಹೊದಿಸಿ ಸತ್ಕರಿಸಲಾಯಿತು. ನೂತನವಾಗಿ ಆಯ್ಕೆಗೊಂಡ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರ ಸ್ವಾಗತ ಕಾರ್ಯಕ್ರಮ ನಡೆಯಿತು.
ಸಂಘದ ಮುಖ್ಯ ಕಾರ್ಯನಿವರ್ಾಹಕ ಅಡಿವೆಪ್ಪ ಮುರಗೋಡ ಸೇರಿದಂತೆ ಸ್ಥಳೀಯ ರಾಜಕೀಯ ಮುಖಂಡರು, ಹಿರಿಯ ನಾಗರಿಕರು, ಯುವಕರು, ಗ್ರಾಮಸ್ಥರು, ನೂತನವಾಗಿ ಆಯ್ಕೆಗೊಂಡ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರು, ಸಂಘದ ಸಿಬ್ಬಂದಿ, ಗ್ರಾಮಸ್ಥರು, ಇತರರು ಇದ್ದರು.