ಚನ್ನಮ್ಮನ ಕಿತ್ತೂರ ಉತ್ಸವ-2025: ಮಾಧ್ಯಮ ಸಮನ್ವಯ ಸಮಿತಿ ಸಭೆ
Channamma's Kitthura Festival-2025: Media Coordination Committee Meeting
ಲೋಕದರ್ಶನ ವರದಿ
ಚನ್ನಮ್ಮನ ಕಿತ್ತೂರ ಉತ್ಸವ-2025: ಮಾಧ್ಯಮ ಸಮನ್ವಯ ಸಮಿತಿ ಸಭೆ
ಬೆಳಗಾವಿ 18 : ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಜಯಗಳಿಸಿದ ಐತಿಹಾಸಿಕ ಮಹತ್ವ ಹೊಂದಿರುವ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಉತ್ಸವಕ್ಕೆ ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಉತ್ಸವವನ್ನು ಯಶಸ್ವಿಗೊಳಸುವಲ್ಲಿ ಮಾಧ್ಯಮ ಪ್ರತಿನಿಧಿಗಳ ಪಾತ್ರ ಮಹತ್ವದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಗುರುನಾಥ ಕಡಬೂರ ಅವರು ತಿಳಿಸಿದರು.
ಚನ್ನಮ್ಮನ ಕಿತ್ತೂರು ತಾಲೂಕು ಪಂಚಾಯತ ಸಭಾಂಗಣದಲ್ಲಿ ಶನಿವಾರ (ಅ.18) ಜರುಗಿದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಅಕ್ಟೋಬರ 23, 24 ಹಾಗೂ 25 ರಂದು ಮೂರು ದಿನಗಳ ಕಾಲ ಜರುಗುವ ಚನ್ನಮ್ಮನ ಕಿತ್ತೂರು ಉತ್ಸವದ ಪ್ರತಿ ಕಾರ್ಯಕ್ರಮದ ಹೆಚ್ಚಿನ ಪ್ರಚಾರ ಆಗಬೇಕು. ಕಾರ್ಯಕ್ರಮದ ವರದಿಗಾಗಿ ಆಗಮಿಸುವಂತಹ ಮಾಧ್ಯಮ ಪ್ರತಿನಿಧಿಗಳಿಗೆ ಅಚ್ಚುಕಟ್ಟಾದ ಮಾಧ್ಯಮ ಕೇಂದ್ರ ತೆರೆಯಲಾಗುವುದು ಎಂದರು.
ಕಾರ್ಯಕ್ರಮದ ಮುಖ್ಯ ವೇದಿಕೆ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು. ಉತ್ಸವದ ವರದಿಗಾಗಿ ಆಗಮಿಸುವ ಮಾಧ್ಯಮ ಪ್ರತಿನಿಧಿಗಳಿಗೆ ನಿಯಮಾನುಸಾರ ಪಾಸ್ ಗಳನ್ನು ವಿತರಿಸಲಾಗುವುದು.
ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವಕ್ಕೆ ವ್ಯಾಪಕ ಪ್ರಚಾರ ನೀಡುವುದರ ಮೂಲಕ ಕಿತ್ತೂರಿನ ಗತವೈಭವವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ಮಾಧ್ಯಮ ಪ್ರತಿನಿಧಿಗಳ ಮೇಲಿದ್ದು, ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಚನ್ನಮ್ಮನ ಕಿತ್ತೂರು ಉತ್ಸವ-2025 ಯಶಸ್ವಿಗೊಳಿಸಲು ವಾರ್ತಾ ಇಲಾಖೆ ಉಪನಿರ್ದೇಶಕರಾದ ಗುರುನಾಥ ಕಡಬೂರ ಅವರು ತಿಳಿಸಿದರು.
ಚನ್ನಮ್ಮನ ಕಿತ್ತೂರು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಅವರು ಮಾತನಾಡಿ, ಮೂರು ದಿನಗಳ ಕಾಲ ಜರುಗುವ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮಾಧ್ಯಮ ಪ್ರತಿನಿಧಿಗಳಾಗಿ ಸ್ಥಾಪಿಸಲಾಗುವ ಮಾಧ್ಯಮ ಕೇಂದ್ರದ ನಿರ್ವಹಣೆಗಾಗಿ ತಾಲೂಕು ಪಂಚಾಯತ ವತಿಯಿಂದ ತಂಡವನ್ನು ನಿಯೋಜಿಸಲಾಗುವುದು. ಮಾಧ್ಯಮ ಕೇಂದ್ರದಲ್ಲಿ ಏನಾದರೂ ಸಮಸ್ಯೆಗಳಿದ್ದರೆ ತ್ವರಿತವಾಗಿ ಪರಿಹರಿಸಲು ಕ್ರಮ ಜರುಗಿಸಲಾಗುವುದು ಎಂದರು.
ಕಿತ್ತೂರು ಚನ್ನಮ್ಮನ ಯಶೋಗಾಥೆಯನ್ನು ರಾಜ್ಯಾದ್ಯಂತ ಪಸರಿಸಲು ಪ್ರತಿ ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾದಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು; ವರದಿಗಾಗಿ ಆಗಮಿಸುವಂತಹ ಪತ್ರಕರ್ತರಿಗೆ ಅನುಕೂಲವಾಗುವಂತಹ ಆಸನಗಳ ವ್ಯವಸ್ಥೆ; ಅಚ್ಚುಕಟ್ಟಾದ ಮಾಧ್ಯಮ ಕೇಂದ್ರದ ಸ್ಥಾಪನೆ ಸೇರಿದಂತೆ ವಿವಿಧ ಸಲಹೆಗಳನ್ನು ಸಭೆಗೆ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳು ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ಮಹಮ್ಮದ್ ಗೌಸ್, ವಾರ್ತಾ ಇಲಾಖೆಯ ವಿಜಯಕುಮಾರ್ ಬೆಟಗೇರಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 