ಬೆಳಗಾವಿ 28: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎಂ.ಎಲ್.ಸಿ ಟ್ರೋಫಿಯ ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆ ನೀಡಿದರು.
ಗ್ರಾಮೀಣ ಕ್ಷೇತ್ರದ ವಿವಿಧೆಡೆ ಕಳೆದ 5 -6 ವರ್ಷಗಳಿಂದ ಲಕ್ಷ್ಮೀ ತಾಯಿ ಫೌಂಡೇಶನ್, ಹರ್ಷ ಗ್ರುಪ್ ಹಾಗೂ ವಯಕ್ತಿಕ ನಿಧಿಯಿಂದ ಬೇರೆ ಬೇರೆ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಲವಾರು ಯುವ ಸಂಘಗಳಿಗೆ, ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಸಹ ವಿತರಿಸಲಾಗಿದೆ. ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಕ್ರೀಡಾ ಚಟುವಟಿಕೆ ನಡೆಯುವಂತೆ ಸಕಲ ಸೌಲಭ್ಯ ನೀಡಲಾಗುತ್ತಿದೆ. ಶೀಘ್ರದಲ್ಲೇ ಬೆಳಗುಂದಿಯಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣವಾಗಲಿದೆ. ಯುವಕರು ಇದರ ಪ್ರಯೋಜನ ಪಡೆಯಬೇಕು ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಕರೆ ನೀಡಿದರು.ಈ ಸಮಯದಲ್ಲಿ ಅಶೋಕ ಕಾಂಬಳೆ, ರಾಹುಲ್ ಉರನಕರ್, ವಿಠ್ಠಲ ದೇಸಾಯಿ, ಪ್ರವೀಣ ದೇವಗೆಕರ್, ಕ್ರೀಡಾಪಟುಗಳು ಉಪಸ್ಥಿತರಿದ್ದರು.