ಬಂಟರ ಕ್ರೀಡೋತ್ಸವಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ
Channaraja Hattiholi inaugurates the Buntar Sports Festival
ಬೆಳಗಾವಿ 26: ನಗರದಲ್ಲಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಚಾಲನೆ ನೀಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು.ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು. ಯಈ ಸಂದರ್ಭದಲ್ಲಿ ಬಂಟ್ ಸಮುದಾಯದ ಮುಖಂಡರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.-
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 