“ಹರ್ಷ ಟ್ರೋಫಿ - ಸೀಸನ್ 6” ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಚನ್ನರಾಜ
Channaraja launches the “Harsha Trophy - Season 6” cricket tournament
ಬೆಳಗಾವಿ 02 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಬಿ.ಕೆ. ಗ್ರಾಮದ ವೈರಲೆಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಪ್ರತಿಷ್ಠಿತ “ಹರ್ಷ ಟ್ರೋಫಿ” ಲಾಂಗ್ ಪಿಚ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಟಾಸ್ ಮಾಡುವ ಮೂಲಕ ಚಾಲನೆ ನೀಡಿದರು. ಅದ್ಧೂರಿಯಾಗಿ ಶುರುವಾದ ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲ ತಂಡಗಳಿಗೆ ಶುಭ ಹಾರೈಸಿದ ಅವರು, ಈ ಪಂದ್ಯಾವಳಿ ಆಯೋಜಿಸುತ್ತಿರುವುದಕ್ಕೆ ಮತ್ತು ಉದ್ಘಾಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎಂದರು. ಕ್ರೀಡಾ ಮನೋಭಾವದಿಂದ, ಸೌಹಾರ್ದಯುತವಾಗಿ ಆಡುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಿ ಎಂದು ಅವರು ಕರ ನೀಡಿದರು. ಈ ವೇಳೆ ಮಾಜಿ ತಾಲೂಕಾ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ನಾಗೇಶ್ ದೇಸಾಯಿ, ಅಬ್ದುಲ್ ಬಾಗವಾನ್ ರಾಕೇಶ್ ಪಾಟೀಲ, ಮಹೇಶ್ ಸುಗ್ನೆಣ್ಣವರ, ನಿಲೇಶ್ ಚಂದಗಡ್ಕರ್, ಅಪ್ಸರ್ ಜಮಾದಾರ್, ಜಮೀಲ್ ಖಾಜಿ, ಅರ್ಬಾಜ್, ನೂರ್ ಜಮಾದಾರ, ನಿಹಾಲ್, ಪ್ರಹ್ಲಾದ, ಕ್ರಿಕೆಟ್ ಪ್ರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 