ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ: ಕೊಪ್ಪಳದಲ್ಲಿ ಆಯೋಜನೆಗೆ ಸಿದ್ಧತೆ
Charitable Award Ceremony: Preparations to be organized at Koppal
ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ: ಕೊಪ್ಪಳದಲ್ಲಿ ಆಯೋಜನೆಗೆ ಸಿದ್ಧತೆ
ಕೊಪ್ಪಳ 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂ ಜೆ ದತ್ತಿ ಪ್ರಶಸ್ತಿ ಪ್ರದಾನ ರಾಜ್ಯಮಟ್ಟದ ಸಮಾರಂಭ ಕೊಪ್ಪಳದ ಗವಿಮಠ ಆವರಣದಲ್ಲಿ ಏರಿ್ಡಸಲು ನಿರ್ಣಯಿಸಿ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಸೋಮವಾರ ಕೊಪ್ಪಳದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಘೋಷಿಸಿದರು.
ಬರುವ ಮಾರ್ಚ್ ತಿಂಗಳ ಮೊದಲನೇ ವಾರದಲ್ಲಿ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಲಾಯಿತು. ಶೀಘ್ರವಾಗಿ ನಿಖರ ದಿನಾಂಕವನ್ನು ಸಹ ಪ್ರಕಟಿಸಲಾಗುವುದು ಎಂದರು. ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಸಂಸದ ಕೆ ರಾಜಶೇಖರ್ ಹಿಟ್ನಾಳ, ಶಾಸಕ ಕೆ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಜಿಲ್ಲಾಧಿಕಾರಿ ನಳೀನ್ ಅತುಲ್ ಮತ್ತು ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಸಂಘದ ರಾಜ್ಯ ಪದಾಧಿಕಾರಿಗಳು ಪಾಲ್ಗೊಳ್ಳುವವರು ಎಂದು ವಿವರಿಸಿದರು. ಸಿದ್ಧತಾ ಸಭೆಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಸಿ ಲೋಕೇಶ್ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಹನುಮಂತ ಹಳ್ಳಿಕೇರಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಸಾಧಿಕ್ ಅಲಿ ,ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಸದಸ್ಯ ಎಚ್‌ಎಸ್ ಹರೀಶ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿಎಸ್ ಗೋನಾಳ, ನಿಕಟಪೂರ್ವ ಜಿಲ್ಲಾಧ್ಯಕ್ಷ ಬಸವರಾಜ್ ಗುಡ್ಲಾನೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ್, ಜಿಲ್ಲಾ ಖಜಾಂಚಿ, ರಾಜು ಬಿ ಆರ್, ಪತ್ರಿಕಾ ಭವನ್ ಕಟ್ಟಡ ಸಮಿತಿ ಅಧ್ಯಕ್ಷ ಎನ್‌ಎಂ ದೊಡ್ಡಮನಿ, ವಿಜಯನಗರ ಜಿಲ್ಲಾ ಅಧ್ಯಕ್ಷ ಸತ್ಯನಾರಾಯಣ, ಜಿಲ್ಲಾ ಉಪಾಧ್ಯಕ್ಷ ರುದ್ರಗೌಡ ಪಾಟೀಲ್ ಜಿಲ್ಲಾ ಕಾರ್ಯದಶಿ, ವೀರಣ್ಣ ಕಳ್ಳಿಮನಿ ,ಜಿಲ್ಲಾ ಸಮಿತಿ ಸದಸ್ಯರಾದ ಶಿವರಾಜ್ ನುಗಡೋಣಿ ಪ್ರಭು ಗಾಳಿ ಧರ್ಮಣ್ಣ ಮೌಲಾ ಹುಸೇನ್ ಬುಲ್ಡಿಯಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 