ಇಂದು ದತ್ತಿ ಉಪನ್ಯಾಸ ಕಾರ್ಯಕ್ರಮ
ಧಾರವಾಡ 27: ಕರ್ನಾಟಕ ವಿದ್ಯಾವರ್ಧಕ ಸಂಘವು, ಪ್ರೊ. ಎಸ್.ಎಲ್. ಸಂಗಮ ದತ್ತಿ ಅಂಗವಾಗಿ ದಿ.28ರಂದು ಶುಕ್ರವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಗ್ರಂಥಾಲಯ ಸೇವೆಯಲ್ಲಿ ಗಣಕಯಂತ್ರದ ಬಳಕೆ ಉಪನ್ಯಾಸ ಮಾಲೆ-9 ಕಾರ್ಯಕ್ರಮ ಏರಿ್ಡಸಿದೆ. ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಸವರಾಜ ಎಸ್. ಅನಾಮಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಧಾರವಾಡ ಕ.ವಿ.ವ. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಸ್.ಎಲ್. ಸಂಗಮ ಗೌರವ ಉಪಸ್ಥಿತರಿರುವರು. ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.