ಮಾನವ ಹಕ್ಕುಗಳ ಆಯೋಗದ ಬಾಕಿ ಪ್ರಕರಣಗಳ ಕುರಿತು ಚಚರ್ೆ ಮೂರು ತಿಂಗಳೊಳಗೆ ವರದಿ ಸಲ್ಲಿಸಿ: ರೂಪಕ ಕುಮಾರ ದತ್ತಾ


ಬೆಳಗಾವಿ: ಮಾನವ ಹಕ್ಕುಗಳ ಆಯೋಗಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮೂರು ತಿಂಗಳೊಳಗಾಗಿ ವರದಿ ಸಲ್ಲಿಸಬೇಕೆಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ರೂಪಕ ಕುಮಾರ ದತ್ತಾ ಅವರು ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಾಯರ್ಾಲಯದ ಸಭಾಂಗಣದಲ್ಲಿ ಗುರುವಾರ (ಆ.02) ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಮಾನವ ಹಕ್ಕುಗಳ ಆಯೋಗದ ಬಾಕಿ ಪ್ರಕರಣಗಳ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯೋಗಕ್ಕೆ ವರದಿ ಸಲ್ಲಿಸಲು ವಿಳಂಬ ಮಾಡಿದರೆ ನೋಟಿಸ್ ನೀಡಲಾಗುವುದು. ನಂತರವೂ ಉತ್ತರ ನೀಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗುವುದು. ಆದ್ದರಿಂದ ಸಕಾಲಕ್ಕೆ ವರದಿ ಸಲ್ಲಿಸುವಂತೆ ಎಚ್ಚರಿಸಿದರು.  

ಖುದ್ದಾಗಿ ಪರಿಶೀಲಿಸಿ: 

ಕೆಳಹಂತದ ಅಧಿಕಾರಿಗಳ ವರದಿಯನ್ನೇ ಜಿಲ್ಲಾಮಟ್ಟದ ಅಧಿಕಾರಿಗಳು ಯಥಾವತ್ತ ಕಳುಹಿಸದೇ ಖುದ್ದಾಗಿ ಪ್ರಕರಣದ ಕುರಿತು ಪರಿಶೀಲಿಸಿ, ವಿಚಾರಣೆ ನಡೆಸಿ ವರದಿಯನ್ನು ಕಳುಹಿಸಿಕೊಡಬೇಕೆಂದು ಸೂಚಿಸಿದರು.  

ಪ್ರಕರಣಗಳು ವಿಳಂಬವಾಗುವುದರಿಂದ ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆಯ ಮೇಲೆ ನಂಬಿಕೆ ಹೊರಟುಹೋಗುತ್ತದೆ. ಆದ್ದರಿಂದ ವರದಿ ಸಲ್ಲಿಸಲು ವಿಳಂಬ ಮಾಡುವುದು ಸಮಂಜಸವಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕಳುಹಿಸಿಕೊಡುವುದರಿಂದ ಆಯೋಗಕ್ಕೂ ಶೀಘ್ರದಲ್ಲೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದರು.

ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡುವುದು ಆಯೋಗದ ಉದ್ದೇಶವಾಗಿದೆ. ಜಿಲ್ಲಾಮಟ್ಟದಲ್ಲಿ ಆಡಳಿತ ಸರಿಯಾಗಿದ್ದರೆ ಇಡೀ ರಾಜ್ಯವೇ ಸುವ್ಯವಸ್ಥಿತವಾಗಿರುತ್ತದೆ. ಆದ್ದರಿಂದ ಜಿಲ್ಲಾಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ವಿವಿಧ ಇಲಾಖೆಯ ಪ್ರಕರಣಗಳ ವಿಚಾರಣೆ:

ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಬಾಕಿ ಇರುವ ಪ್ರಕರಣಗಳ ಕುರಿತು ರೂಪಕ ಕುಮಾರ ದತ್ತಾ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು ಹಾಗೂ ಅವುಗಳ ಬಗ್ಗೆ ಶೀಘ್ರದಲ್ಲೇ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ, ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ನಾಡಗೌಡ ಸೇರಿದಂತೆ ಜಿಲ್ಲಾ ಪಂಚಾಯತ, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.