ಚೆನ್ನಗಿರಿ : ರಸ್ತೆ ಅಪಘಾತದಲ್ಲಿ ಮೂವರು ಸಾವು

ದಾವಣಗೆರೆ, ಜೂನ್ 11,ಚನ್ನಗಿರಿ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಇನ್ನೊಬ್ಬ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತ ಸಂಭವಿಸಿದಾಗ ಸಂತ್ರಸ್ತರು ಅಜ್ಜಂಪುರದಿಂದ ಚೆನ್ನಗಿರಿ ತಾಲ್ಲೂಕಿನ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು ಎನ್ನಲಾಗಿದೆ. ಚೆನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.