ಕೋಲಾರದಲ್ಲಿ 44ನೆಯ ರಾಜ್ಯ ಮಟ್ಟದ ಮಾಸ್ಟರ‌್ಸ ಅಥ್ಲೆಟಿಕ್ ಕ್ರೀಡಾಕೂಟ ಚೆನ್ನಮ್ಮ ಹೆಡೆ ಬೈಲೂರಗೆ 2 ಚಿನ್ನ
Chennamma Hede Bailur wins 2 gold medals at the 44th State Level Masters Athletics Games in Kolar
ಧಾರವಾಡ 23: ಬೆಂಗಳೂರಿನ ಕರ್ನಾಟಕ ರಾಜ್ಯ ಮಾಸ್ಟರ‌್ಸ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಕೋಲಾರ ಜಿಲ್ಲಾ ಮಾಸ್ಟರ‌್ಸ ಅಥ್ಲೆಟಿಕ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಕೋಲಾರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಂಗಣದಲ್ಲಿ ಇತ್ತೀಚೆಗೆ ಜರುಗಿದ 44ನೆಯ ರಾಜ್ಯ ಮಟ್ಟದ ಮಾಸ್ಟರ‌್ಸ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಇಲ್ಲಿಯ ಚೆನ್ನಬಸವೇಶ್ವರನಗರ ನಿವಾಸಿ, 74 ವರ್ಷದ ನಿವೃತ್ತ ಅಧ್ಯಾಪಕಿ ಚೆನ್ನಮ್ಮ ಹೆಡೆ ಬೈಲೂರ 2 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
70 ವರ್ಷ ಮೇಲ್ಪಟ್ಟ ವಯೋಮಾನದ ಮಹಿಳೆಯರ ವಿಭಾಗದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ 14.58 ಮೀಟರ್ ದೂರ ಭರ್ಚಿ ಎಸೆದು ಪ್ರಥಮ ಸ್ಥಾನ ಪಡೆದರು. ಇದೇ ವಿಭಾಗದ ಟ್ರಿಪ್ಪಲ್ ಜಂಪ್ ಸ್ಪರ್ಧೆಯಲ್ಲಿಯೂ ಪ್ರಥಮರಾಗಿ ಎರಡೂ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಿ. ಡೇವಿಡ್ ಪ್ರೇಮನಾಥ ಪದಕ ಮತ್ತು ಪ್ರಮಾಣಪತ್ರ ವಿತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 