ಚೆನ್ನಮ್ಮ ಸ್ವಾಭಿಮಾನದ ಪ್ರತೀಕ: ಬಸವ ಜಯ ಮೃತ್ಯುಂಜಯ ಶ್ರೀ
Chennamma is a symbol of self-respect: Basava Jaya Mrityunjaya Sri
ತಾಳಿಕೋಟಿ 21: ವೀರರಾಣಿ ಕಿತ್ತೂರು ಚೆನ್ನಮ್ಮ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಕೆಚ್ಚದೆಯಿಂದ ಹೋರಾಡಿದ ದೇಶದ ಪ್ರಥಮ ಮಹಿಳೆ ಆಗಿದ್ದಾಳೆ ಅವಳ ಶೌರ್ಯ ಪರಾಕ್ರಮ ಹಾಗೂ ಸ್ವಾಭಿಮಾನದ ಗುಣವನ್ನು ಬೆಳೆಸಿಕೊಳ್ಳಲು ಎಲ್ಲರೂ ಪ್ರಯತ್ನಿಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ರಾಜವಾಡೆ ಆವರಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಸ್ಥಾಪನೆ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡ ಧರ್ಮಸಭೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಚೆನ್ನಮ್ಮ ಕೇವಲ ಕಿತ್ತೂರಿನ ರಾಣಿ ಆಗಿರಲಿಲ್ಲ ಅವಳು ಮಹಾ ದೈವ ಭಕ್ತೆಯೂ ಆಗಿದ್ದಳು. ತ್ರಿಕಾಲ ಲಿಂಗಪೂಜೆ ಅವಳ ಆರಾಧನೆ ಆಗಿತ್ತು ಇದರಿಂದಲೇ ಅವಳಲ್ಲಿ ಅಂತಹ ಶ್ರೇಷ್ಠ ಗುಣಗಳು ಬೆಳೆದಿದ್ದವು. ಲಿಂಗ ಪೂಜೆಯಲ್ಲಿ ಅಗಾಧವಾದ ಶಕ್ತಿ ಅಡಗಿದೆ ಇದನ್ನು ಲಿಂಗಾಯತ ಸಮಾಜದ ಬಾಂಧವರು ತಿಳಿದುಕೊಳ್ಳುವ ಅಗತ್ಯ ಇದೆ. ಎರಡು ವರ್ಷಗಳಿಂದ ಇಲ್ಲಿ ತಾಯಿ ಚೆನ್ನಮ್ಮಳ ಜೀವನ ಚರಿತ್ರೆ ಪ್ರವಚನದ ಮೂಲಕ ತಿಳಿಸಿ ಕೊಡುವ ಪ್ರಯತ್ನ ನಡೆದಿರುವುದು ಸಂತೋಷದ ವಿಷಯ ಇದರ ಸಂಘಟಕಿಯಾದ ನೀಲಮ್ಮಗೌಡ್ತಿ ಪಾಟೀಲರಿಗೆ ಅಭಿನಂದಿಸುತ್ತೇನೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಲ್ಲವಿ ನಾಡಗೌಡ ಮಾತನಾಡಿ ಚೆನ್ನಮ್ಮಾಜೀಯ ಶೌರ್ಯ ಪರಾಕ್ರಮ ದೇಶಭಕ್ತಿ ಹಾಗೂ ಸ್ವಾಭಿಮಾನವನ್ನು ಬೆಳೆಸಿಕೊಳ್ಳುವುದರ ಮೂಲಕ ಅವಳ ಬದುಕಿನ ಆದರ್ಶಗಳನ್ನು ಅನುದಿನವೂ ಅನುಸರಿಸುವ ಅಗತ್ಯ ಇದೆ ಎಂದರು. ಪ್ರವಚನಕಾರ ಪ್ರಭುಲಿಂಗ ಶರಣರು ಆರಂಭದಲ್ಲಿ 9ನೇ ದಿನದ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಮಹನೀಯರಿಗೆ ಹಾಗೂ ಪಟ್ಟಣದ ಸಹಕಾರಿ ಬ್ಯಾಂಕಿನ ನಿರ್ದೇಶಕರಿಗೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಜ್ಯೋತಿಷ್ಯ ರತ್ನ ರಾಮಲಿಂಗಯ್ಯ ಮಹಾಸ್ವಾಮಿಗಳು, ಮಂಜುಳಾ ತಾಯಿ ಬಳಗಾನೂರ, ಮಹೆಬೂಬ ಮುತ್ಯಾ ವಹಿಸಿದ್ದರು. ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ನೀಲಮ್ಮ ಪಾಟೀಲ ವಹಿಸಿದ್ದರು. ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ಜುಬೇದಾಬೇಗಂ ಎಚ್. ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಬಾರ, ಸೋಮಶೇಖರ ಮಾಳನೂರ,ಕಾವೇರಿ ಅರ್ಜುನ್ ಸಿಂದಗಿ, ಚೆನ್ನಮ್ಮಾಜಿ ಪುತ್ಥಳಿ ನಿರ್ಮಾಣ ಸಮಿತಿಯ ಗೌರವ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಉಪಾಧ್ಯಕ್ಷ ಕಲ್ಲಪ್ಪ ಪಾಟೀಲ, ಪ್ರಧಾನ ಕಾರ್ಯದರ್ಶಿ ಎಂ.ಬಿ.ಕೋಟಿ, ಕಾರ್ಯದರ್ಶಿ ಬಿ.ಕೆ.ಪಾಟೀಲ ಮತ್ತಿತರರು ಇದ್ದರು. ಪ್ರಭುಲಿಂಗ ಶರಣರು ಪ್ರಾರ್ಥಿಸಿದರು. ಅಂಬಿಕಾ ಪಾಟೀಲ ಸ್ವಾಗತಿಸಿದರು. ಶರಣಬಸಪ್ಪ ಗಂಗಶಟ್ಟಿ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 