ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ, ಭಾಗ್ಯಶ್ರೀ ಖಜಾಂಚಿ
Chennamma is the taluk president of the Farmers' Association, Bhagyashree is the treasurer.
ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ, ಭಾಗ್ಯಶ್ರೀ ಖಜಾಂಚಿ
ದೇವರಹಿಪ್ಪರಗಿ 11: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮಹಿಳಾ ಘಟಕದ ನೂತನ ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಹಾಗೂ ಭಾಗ್ಯಶ್ರೀ ಹದಗಲ್ ಅವರನ್ನು ಖಜಾಂಚಿ ಸ್ಥಾನಕ್ಕೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರ ಸೂಚನೆಯಂತೆ ತಾಲ್ಲೂಕು ಅಧ್ಯಕ್ಷರಾದ ಈರ್ಪ ಕುಳೇಕುಮಟಗಿ ಅವರು ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.
ತಾಲೂಕು ಅಧ್ಯಕ್ಷ ಈರ್ಪ ಕುಳೇಕುಮಟಗಿ ಮಾತನಾಡಿದ ಅವರು, ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲಬೇಕು ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಸೈದಾಂತಿಕ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ರೈತರ ಬೆನ್ನೆಲುಬಾಗಿ ನಿಂತು ಪರಿಹಾರ ಒದಗಿಸುವ ಸಂವಿಧಾನದ ಬದ್ಧ ನೀತಿ ನಿಯಮಗಳನ್ನು ತೋರದೆ ಶಿಸ್ತಿನಿಂದ ಮತ್ತು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಗೌರವಾಧ್ಯಕ್ಷ ಶಿವಾನಂದ ಹಿರೇಮಠ, ಜಿಲ್ಲಾ ಉಪಾಧ್ಯಕ್ಷ ಸಂಪತ್ ಜಮಾದಾರ, ನಗರ ಘಟಕದ ಅಧ್ಯಕ್ಷೆ ಶಾಕೀರಾ ಹೆಬ್ಬಾಳ, ಮಹಿಳಾ ಮುಖಂಡೆ ಸುನಂದಾ ಸೋನ್ನಹಳ್ಳಿ ಸೇರಿದಂತೆ ಹಲವಾರು ಜನ ರೈತ ಸಂಘದ ಪದಾಧಿಕಾರಿಗಳ, ಮಹಿಳಾ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 