ಸೃಜನಶೀಲತೆ, ಶೈಕ್ಷಣಿಕ ಕಾರ್ಯಕ್ಷಮತೆ ಹೆಚ್ಚಿಸಲು ಚೆಸ್ ಸಹಕಾರಿ : ದೀಪಾ ಎ. ಸಿ.
Chess helps in increasing creativity and academic performance: Deepa A. C.
ಬೆಳಗಾವಿ 28: ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಸ್ಯೆ ಪರಿಹಾರ ಮತ್ತು ಸ್ಮರಣೆಯಂತಹ ಅರಿವಿನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಚೆಸ್ ಪ್ರೇರಣೆ ನೀಡುತ್ತದೆ. ಅಲ್ಲದೆ ವ್ಯಕ್ತಿಗಳಲ್ಲಿ ಸೃಜನಶೀಲತೆ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಚೆಸ್ ಪ್ರಮುಖ ಪಾತ್ರವಹಿಸುತ್ತದೆ ಎಂದು ಭಾತ್ಕಂಡೆ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯೆ ದೀಪಾ ಎ.ಸಿ. ಅಭಿಪ್ರಾಯ ಪಟ್ಟರು.
ಅವರು ಇಂದು ಶಿವಬಸವ ನಗರದ ನಾಗನೂರು ಪ್ರಭುದೇವ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ರಾಪಿಡ್ ಚೆಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ಮಾತನಾಡಿ ಕ್ರೀಡಾ ಮನೋಭಾವ ಮತ್ತು ಇತರರಿಗೆ ಗೌರವ ನೀಡುವಂತಹ ಅಮೂಲ್ಯವಾದ ಸಾಮಾಜಿಕ ಕೌಶಲ್ಯಗಳನ್ನು ಚೆಸ್ ಕಲಿಸುತ್ತದೆ. ವಿದ್ಯಾರ್ಥಿಗಳು ಇದನ್ನು ಕೇವಲ ಒಂದು ಪಂದ್ಯಯೆಂದು ಭಾವಿಸದೆ ಸಮಾಜವನ್ನು ಅರ್ಥೈಸಿಕೊಳ್ಳುವ ಅವಕಾಶವೆಂದು ಭಾವಿಸಬೇಕು ಎಂದರು.
ಲವ್ ಡೇಲ್ ಶಾಲೆಯ ಪ್ರಾಚಾರ್ಯೆ ಲಕ್ಷ್ಮಿ ಇಂಚಲ, ಬೆನಾನ್ ಸ್ಮಿತ್ ಶಾಲೆಯ ಶಿಕ್ಷಕ ಎಂ.ಬಿ. ಅಂಗಡಿ ಹಾಗೂ ಜೀವನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಜನಿಫರ್ ಪಾಟೀಲ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ವೇದಿಕೆಯ ಮೇಲೆ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಡಿ. ಶಿವನಾಯ್ಕರ ಹಾಗೂ ನಾಗನೂರು ಪ್ರಭುದೇವ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಸ್ವಪ್ನಾ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 