ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಕಾರ್ಯಕ್ರಮ ಆಯೋಜನೆ
Chhatrapati Shivaji Maharaj's Jayanthi program planned on 19th Feb
ಧಾರವಾಡ ಫೆ.17: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಫೆಬ್ರುವರಿ 19, 2026 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಭಾರತ ಪ್ರೌಢಶಾಲಾ ಆವರಣದಲ್ಲಿರುವ ಮರಾಠ ವಿದ್ಯಾಪ್ರಸಾರಕ ಮಂಡಳದ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್.ಖಾದ್ರಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ ಅಧ್ಯಕ್ಷ ನಾಗೇಂದ್ರ ಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್.ಕೋನರಡ್ಡಿ, ಎಸ್.ವ್ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಫ್.ಹೆಚ್.ಜಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಶಂಕರ ಶೇಳಕೆ, ಮಯೂರ ಮೋರೆ, ಪ್ರಕಾಶ ಘಾಟಗೆ ಅವರು ಭಾಗವಹಿಸುವರು.
ಮರಾಠ ವಿದ್ಯಾ ಪ್ರಸಾರಕ ಮಂಡಳ ಅಧ್ಯಕ್ಷ ಮನೋಹರ ನಿಂಗಪ್ಪ ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಭೀಮಪ್ಪ ಚವ್ಹಾಣ, ಕಾರ್ಯಧ್ಯಕ್ಷ ಸುನೀಲ ಪರುಶುರಾಮ ಮೋರೆ, ಕಾರ್ಯದರ್ಶಿ ರಾಜು ತಿರಕಪ್ಪಾ ಬಿರ್ಜೆನವರ, ಸಹ ಕಾರ್ಯದರ್ಶಿ ರಾಜು ಜ್ಯೋತಿಬಾ ಕಾಳೆ ಹಾಗೂ ಸಮಾಜದ ಮುಖಂಡ ಭೀಮಪ್ಪ ಖಸಾಯಿ ಅವರು ಉಪಸ್ಥಿತರಿರುವರು.
ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಶ್ರೀನಿವಾಸ ಎಚ್. ಪೂಜಾರ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಭಾಗವಹಿಸುವರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 