ನವದೆಹಲಿ, ಅ 19: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ 5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಜೈಲಿನ ಪ್ರಕರಣದಲ್ಲಿ ಜಾಮೀನು ನೀಡುವಂತೆ ಸುಪ್ರೀಂಕೋಟ್ರ್ನಲ್ಲಿ ಚಿದಂಬರಂ ಪರ ವಕೀಲರು ಮನವಿ ಮಾಡಿದ್ದು ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.ಇನ್ನು ಚಳಿಗಾಲದಲ್ಲಿ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು . ಈಗ ಕೋರ್ಟ್ ತೀಪು ಕಾಯ್ದಿಸಿರುವ ಕಾರಣ ಎಲ್ಲರ ಚಿತ್ತ ನ್ಯಾಯಾಲಯದತ್ತ ನೆಟ್ಟಿದೆ.