ಐಎನ್ಎಕ್ಸ್ ಮೀಡಿಯಾ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಚಿದಂಬರಂ

ನವದೆಹಲಿ, ಅ 3 (ಯುಎನ್ಐ) ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಗುರುವಾರ ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣಾ ಮುರಾರಿ ಅವರನ್ನು ಒಳಗೊಂಡ ಪೀಠದ ಮುಂದೆ ಕಾಂಗ್ರೆಸ್ ನಾಯಕ್ ಚಿದಂಬರಂ ಅವರ ಪರ ವಕೀಲ ಕಪಿಲ್ ಸಿಬಲ್ ವಿಷಯ ಪ್ರಸ್ತಾಪಿಸಿದರು. ಆದಾಗ್ಯೂ, ಈ ನ್ಯಾಯಾಧೀಶರು ಈ ಅರ್ಜಿಯನ್ನು ನಿಗದಿತ ಪಟ್ಟಿಗಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸಿತು. ದೆಹಲಿ ಹೈಕೋರ್ಟ್ ಸೋಮವಾರ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಳ್ಳಿಹಾಕಿತ್ತು. ಮಾಜಿ ಹಣಕಾಸು ಸಚಿವರು ಸೆಪ್ಟಂಬರ್ 5ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಸೆಪ್ಟಂಬರ್ 19ರಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3ರವರೆಗೆ ವಿಸ್ತರಿಸಿತ್ತು.