ಅಭಿವೃದ್ಧಿ ಕಾಮಗಾರಿಗಳಿಗೆ ಚಿದಾನಂದ ಸವದಿ ಭೂಮಿಪೂಜೆ

ಅಭಿವೃದ್ಧಿ ಕಾಮಗಾರಿಗಳಿಗೆ ಚಿದಾನಂದ ಸವದಿ ಭೂಮಿಪೂಜೆ  Chidananda Savadi performs groundbreaking ceremony for development works.

ಅಭಿವೃದ್ಧಿ ಕಾಮಗಾರಿಗಳಿಗೆ ಚಿದಾನಂದ ಸವದಿ ಭೂಮಿಪೂಜೆ  

ಅಥಣಿ 11: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಜನಪರ ಹಾಗೂ ಅಭಿವೃದ್ಧಿಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ ಎಂದು ಯುವ ನಾಯಕ ಚಿದಾನಂದ ಸವದಿ ಹೇಳಿದರು. ತಾಲೂಕಿನ ನಂದೇಶ್ವರ, ಬಳವಾಡ, ಕೊಟ್ಟಲಗಿ, ಶಿನ್ನಾಳ ಹಾಗೂ ಶೇಗುಣಸಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.  

ನಂದೇಶ್ವರದಲ್ಲಿ ಚಂದ್ರಗಿರಿ ಮಠದ ಸಮುದಾಯ ಭವನ, ಬಳವಾಡದಲ್ಲಿ ಬೀರೇಶ್ವರ ಹಾಗೂ ಬಸವೇಶ್ವರ ದೇವಸ್ಥಾನಗಳ ಸಮುದಾಯ ಭವನ, ಕೊಟ್ಟಲಗಿಯಲ್ಲಿ ಕೋಟಿ ಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನ, ಶಿನ್ನಾಳದಲ್ಲಿ ಸಮುದಾಯ ಭವನ ಹಾಗೂ ಶೇಗುಣಸಿಯಲ್ಲಿ ಪೇವಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ‘ಪ್ರಜಾ ಸೇವೆ’ ಕಾರ್ಯಕ್ರಮ ಜಾರಿಗೊಳಿಸಿದೆ. ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಸರ್ಕಾರ ಜನಪರ ಆಡಳಿತ ನೀಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭಿಯಂತರ ವೀರಣ್ಣ ವಾಲಿ ಸೇರಿದಂತೆ ವಿವಿಧ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಬಳವಾಡ ಗ್ರಾಮದಲ್ಲಿ ಅಪ್ಪಯ್ಯ ಸ್ವಾಮಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಿದಾನಂದ ಸವದಿ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.