ಅಂಗನವಾಡಿ ನೂತನ ಕಟ್ಟಡಕ್ಕೆ ಚಿದಾನಂದ ಸವದಿ ಭೂಮಿಪೂಜೆ
Chidananda Savadi performs groundbreaking ceremony for new Anganwadi building.
ಅಥಣಿ ೨೪: ಅಥಣಿ ಪುರಸಭೆಯ ವಾರ್ಡ್ ೨೦ರ ಸ್ವಾಮಿ ಪ್ಲಾಟ್ ಬಡಾವಣೆಯಲ್ಲಿ ಅಂಗನವಾಡಿ ನೂತನ ಕಟ್ಟಡ ನಿರ್ಮಾಣಕ್ಕೆ ಯುವ ಧುರೀಣ ಚಿದಾನಂದ ಸವದಿ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿದಾನಂದ ಸವದಿ, ಸ್ವಾಮಿ ಪ್ಲಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶದ ಚಿಕ್ಕ ಮಕ್ಕಳ ಅನುಕೂಲಕ್ಕಾಗಿ ರೂ೨೦ ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಸದಸ್ಯರಾದ ರಾಜಶೇಖರ ಗುಡೋಡಗಿ, ಮಲ್ಲೇಶ ಹುದ್ದಾರ, ಮಲ್ಲಿಕಾರ್ಜುನ ಬುಟಾಳಿ, ಸಂತೋಷ ಸಾವಡಕರ, ಬಸವರಾಜ ಹಳ್ಳದಮಳ ಸೇರಿದಂತೆ ಪುರಸಭೆ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಸಿಡಿಪಿಒ ಮಹಾದೇವ ಕೋಳಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 