ವಿಶ್ವ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್‌.ಸುಬ್ರಮಣ್ಯ

ವಿಶ್ವ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್‌.ಸುಬ್ರಮಣ್ಯ Chief Civil Judge N. Subramanya inaugurated World Mental Health Day

ವಿಶ್ವ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್‌.ಸುಬ್ರಮಣ್ಯ  

ವಿಜಯನಗರ(ಹೊಸಪೇಟೆ) 29:  ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯವಾದದು, ಯೋಗ ಮತ್ತು ಧ್ಯಾನದಿಂದ ಎಲ್ಲರಿಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್‌.ಸುಬ್ರಮಣ್ಯ ಹೇಳಿದರು.  ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಟಿಎಂಎಇಎಸ್ ನರ್ಸಿಂಗ್ ಆಫ್ ಸ್ಕೂಲ್ ಸಹಭಾಗಿತ್ವದಲ್ಲಿ ಏರಿ​‍್ಡಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಅಂತ ರಾಷ್ಡ್ರಿಥಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬುಧವಾರ ಮಾತನಾಡಿದರು,  

ನಿತ್ಯ ಯೋಗಾಭ್ಯಾಸ ಮತ್ತು ಧ್ಯಾನ, ಒತ್ತಡ ರಹಿತ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಮಾನಸಿಕ ಆರೋಗ್ಯ ಉಲ್ಲಾಸಭರಿತವಾಗಿರಲಿದೆ. ಸದಾ ಸಕಾರಾತ್ಮಕ ಚಿಂತನೆ, ದುಶ್ಚಟಗಳಿಂದ ಮುಕ್ತವಾಗಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಮಾನಸಿಕವಾಗಿ ಸಂತಸ ವೃದ್ಧಿಯಾಗಲಿದೆ. ಮನೆಯಲ್ಲಿನ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಅಸಮತೋಲನ ಅಹಾರ ಪದ್ದತಿ ದೇಹದಲ್ಲಿ ಜಡತ್ವ ಹೆಚ್ಚಿಸಲಿದೆ. ಇದರಿಂದ ದೈಹಿಕ ಕಳೆದುಕೊಂಡರೆ ಮಾನಸಿಕ  ಹಾಳಾಗಲಿದೆ. ವಿಶ್ವ ಮಾನಸಿಕ ದಿನಾಚರಣೆ ನಿಮಿತ್ತ ಎಲ್ಲರಿಗೂ ಮಾನಸಿಕ ನೆಮ್ಮದಿಗೆ ಪೂರಕವಾದ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ. ಸಮಾಜದಲ್ಲಿರುವ ಮಾನಸಿಕ ರೋಗಿಗಳನ್ನು ಮಾನವೀಯತೆಯಿಂದ ನೋಡಿಕೊಳ್ಳುವ ಮೂಲಕ ಅವರನ್ನು ಉತ್ತಮ ನಾಗರಿಕರಾಗಲು ಪರಿವರ್ತನೆ ಮೂಡಿಸಬಹುದಾಗಿದೆ. ಅಂತವರು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಅಥವಾ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು. ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಭಾಗದ ಕೆಲವು ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲಗರ್ಭಿಣಿಯರು ಸಂಖ್ಯೆ ದಾಖಲಾಗುತ್ತಿರುವುದು ವಿಷಾದನೀಯ. ಇದನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಜತೆಗೆ ಸಾರ್ವಜನಿಕರು ಸಹಕರಿಸಬೇಕು. ಮುಖ್ಯವಾಗಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಕಂಡು ಬಂದಲ್ಲಿ ಕೂಡಲೇ ಆಯಾ ತಾಲೂಕಿನ ತಾಲೂಕು ಕಾನೂನು ಸೇವಾ ಸಮಿತಿಗೆ ದೂರು ಸಲ್ಲಿಸಬೇಕು ಎಂದರು.  

ಸಿವಿಲ್ ನ್ಯಾಯಾಧೀಶರು ಪ್ರಶಾಂತ್ ನಾಗಲಾಪುರ್ ಮಾತನಾಡಿ, ಅಂತರಾಷಿೊಥಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕವಾಗಿ ಹೆಣ್ಣುಮಕ್ಕಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ದೌರ್ಜನ್ಯದಂತಹ ಪ್ರಕರಣಗಳನ್ನು ನಿಯಂತ್ರಿಸಲು ಇಲಾಖೆಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಶಿಕ್ಷಣ ಮಹತ್ವ ತಿಳಿಸಬೇಕಿದೆ. ಬಾಲ್ಯವಿವಾಹ ಸೇರಿ ಮಹಿಳೆಯರ ಮೇಲಿನ ದೌರ್ಜನ್ಯ ಕಂಡರೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಬೇಕು ಎಂದರು.  

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯ್ಕ್‌ ಎಲ್‌.ಆರ್ ಮಾತನಾಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ತಿಂಗಳ ಮಂಗಳವಾರದಂದು ಮನೋಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಹೊಸಪೇಟೆ ತಾಲೂಕಿನ ಮಾನಸಿಕ ಅಸ್ವಸ್ಥಗೊಂಡ ಅಪರಿಚಿತ ವ್ಯಕ್ತಿಗಳಿಗೆ ವಿವಿಧ ಇಲಾಖೆ ವತಿಯಿಂದ 5 ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಡಿಮ್ಹಾನ್ಸ್‌ ಧಾರವಾಡ ಆಸ್ಪತ್ರೆ ಕಳುಹಿಸಿ ಅವರು ಗುಣಮುಖಗೊಂಡ ನಂತರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಆಪ್ತ ಸಮಾಲೋಚನೆ ಪಡೆಯಲು ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಬಹುದು ಎಂದರು.  

ನಗರ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ರಾಜಶೇಖರ ಮಾತನಾಡಿ, ಈಚೇಗೆ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊಸ ಸಂಖ್ಯೆಯಿಂದ ಬಂದಿರುವ ಲಿಂಕ್ ಅಥವಾ ಕರೆಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೊಲೀಸ್ ಸಹಾಯವಾಣಿ 112 ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.  

ಇದೇ ವೇಳೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತವಿಕವಾಗಿ ಮಾತನಾಡಿದರು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಸಿಂಧು ಅಂಗಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸತೀಶ್ ಚಂದ್ರ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿನಯ, ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಟಿಎಂಎಇಎಸ್ ನರ್ಸಿಂಗ್ ಆಫ್ ಸ್ಕೂಲ್ ಪ್ರಾಂಶುಪಾಲ ಡಾ.ಎನ್‌.ಸೋಮಶೇಖರ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮಾರೇಶ್, ಸಹದೇವ, ಸೇರಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.