ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಕೊಪ್ಪಳ ಜಿಲ್ಲಾ ಪ್ರವಾಸ
Chief Minister's Economic Advisor's tour of Koppal district
ಕೊಪ್ಪಳ 14 : ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಆಗಸ್ಟ್ 15 ಮತ್ತು ಆ. 16 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಬಸವರಾಜ ರಾಯರಡ್ಡಿ ಅವರು ಆ. 14 ರಂದು ಬೆಂಗಳೂರಿನಿಂದ ರಸ್ತೆಯ ಮೂಲಕ ನಿರ್ಗಮಿಸಿ, ರಾತ್ರಿ 9 ಗಂಟೆಗೆ ಹೊಸಪೇಟೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಆ. 15 ರಂದು ಬೆಳಿಗ್ಗೆ 8 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, 9 ಗಂಟೆಗೆ ಯಲಬುರ್ಗಾಕ್ಕೆ ಆಗಮಿಸಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ 11.30ಕ್ಕೆ ಯಲಬುರ್ಗಾದಿಂದ ನಿರ್ಗಮಿಸಿ, ಮಧ್ಯಾಹ್ನ 12 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಸಭೆಯ ನಂತರ ಸಂಜೆ 6.30ಕ್ಕೆ ಕೊಪ್ಪಳದಿಂದ ನಿರ್ಗಮಿಸಿ, ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು.
ಆ. 16 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, 11 ಗಂಟೆಗೆ ಯಲಬುರ್ಗಾಕ್ಕೆ ಆಗಮಿಸಿ ಯಲಬುರ್ಗಾ-ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡುವರು. ನಂತರ ಅಂದು ಸಂಜೆ 4.30ಕ್ಕೆ ಯಲಬುರ್ಗಾದಿಂದ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳಸುವರು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 