ಬೆಂಗಳೂರು, ಆಗಸ್ಟ್ 5 ಜಮ್ಮು ಮತ್ತು ಕಾಶ್ಮೀರಕ್ಕೆವಿಶೇಷ ಸೌಲಭ್ಯ ಹಾಗೂ ಸ್ಥಾನಮಾನಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸಂವಿಧಾನದ 370 ಮತ್ತು 35 ಎ ವಿಧಿ ಹಿಂದಕ್ಕೆ ಪಡೆಯುವ ಐತಿಹಾಸಿಕ ತೀರ್ಮಾನವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಸ್ವಾಗತಿಸಿದ್ದಾರೆ.
ಇವರ ಜೊತೆಗೆ ಇತರೆ ಬಿಜೆಪಿ ಇತರೆ ನಾಯಕರೂ ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಕೇಂದ್ರ ಸರ್ಕಾರದ ಈ ನಿರ್ಧಾರ ಮೆಚ್ಚಿಕೊಂಡಿದ್ದಾರೆ.
ಕಳೆದ 5 ದಶಕಗಳಿಂದ ಜಮ್ಮು ಮತ್ತು ಕಾಶ್ಮೀರ ಜನತೆ ಅನುಭವಿಸುತ್ತಿದ್ದ ವಿಶೇಷ ಸೌಲಭ್ಯ ಹಿಂಪಡೆಯುವ ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ಸಂಸತ್ತಿನಲ್ಲಿ ಮಂಡಿಸಿರುವುದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ ಎಂದು ಅವರುಗಳು ಪ್ರತಿಕ್ರಿಯೆ ನೀಡಿದ್ದಾರೆ.
ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗಿದೆ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೃಷ್ಣ ಬಣ್ಣಿಸಿದ್ದಾರೆ.
ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಹ ಪೀಡಿತ ಗ್ರಾಮಗಳ ವೈಮಾನಿಕ ಸಮೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ,ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಇದು ಐತಿಹಾಸಿಕ ನಿರ್ಧಾರ.ಇದನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ.ಇದಕ್ಕಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರನ್ನು ಅಭಿನಂದಿಸುವುದಾಗಿ ಹೇಳಿದರು.
ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವ ಕೇಂದ್ರ ರ್ಕಾ ನಿರ್ಧಾರದ ಬಗ್ಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ತವರು ಕ್ಷೇತ್ರ ಹೊನ್ನಾಳಿಯಲ್ಲಿ ಬಿಜೆಪಿ ಮುಖಂಡ ರೇಣುಕಾಚಾರ್ಯ ಸಿಹಿ ಹಂಚಿ ಸಂಭ್ರಮಿಸಿದರು.