ಸಮಚಿತ್ತದಿಂದ ತೀಪು ಸ್ವಾಗತಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ
ಬೆಂಗಳೂರು, ನ 9 : ರಾಮಮಂದಿರ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀಪು ಹೊರಹೊಮ್ಮಲಿದ್ದು, ಸವೋಚ್ಚ ನ್ಯಾಯಾಲಯ ಪ್ರಕಟಿಸುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವಾಗತಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಪಕ್ಷದ ಮುಖಂಡರೊಂದಿಗೆ ಕೆ.ಆರ್.ಪೇಟೆಯಲ್ಲಿ ನಡೆಯಲಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ ಸೂಕ್ಷ್ಮ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ತೀಪು ಯಾರ ಪರವೇ ಬರಲಿ ಯಾರ ವಿರುದ್ಧವೇ ಬರಲಿ ನ್ಯಾಯಾಲಯದ ತೀರಪ್[ರ್ಪುಗೆ ಗೌರವ ಕೊಡಬೇಕು ಎಂದರು. ಮೇಲ್ಮನೆ ಬಿಜೆಪಿ ಸದಸ್ಯ ರವಿಕುಮಾರ್ ಮಾತನಾಡಿ, ಎಲ್ಲಾ ಪ್ರಮುಖರು ಕ್ಷೇತ್ರದಲ್ಲಿ ಇದ್ದು, ಪರಿಸ್ಥಿತಿಯನ್ನು ಪೂರ್ಣ ಶಾಂತಿಯುತವಾಗಿ ನಿಭಾಯಿಸಬೇಕು. ತೀಪು ಬಂದ ನಂತರ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಹೇಳಿಕೆಗಳ ನಂತರ ಅದೇ ರೀತಿಯಲ್ಲಿ ನಮ್ಮ ಅಭಿಪ್ರಾಯಗಳು ರೂಪಿತವಾಗಬೇಕು. ಸೂಕ್ಷ್ಮಪ್ರದೇಶಗಳಲ್ಲಿ, ಕಾರ್ಯಾಲಯ ಮತ್ತಿತರ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಯಾವುದೇ ರೀತಿಯಲ್ಲಿ ಮೆರವಣಿಗೆ ಹಾಗೂ ವಿಜಯೋತ್ಸವಗಳನ್ನು ಮಾಡಬಾರದು. ಸಾಮಾಜಿಕ ಜಾಲತಾಣ ಪ್ರಕಟಣೆಗಳ ಮೇಲೆ ವಿಶೇಷ ಗಮನವಿರಬೇಕು ಎಂದರು. ಸರ್ಕಾರಿ ಅಧಿಕಾರಿಗಳೊಂದಿಗೆ ಸಂಪರ್ಕವಿರಿಸಿಕೊಂಡು ಸಂಪೂರ್ಣ ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಸೊರಬ ಕ್ಷೇತ್ರದ ಶಾಸಕ ಕುಮಾರ್ ಎಸ್.ಬಂಗಾರಪ್ಪ, ಕ್ಷೇತ್ರದಲ್ಲಿ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಬಾರದು. ನ್ಯಾಯಾಲಯದ ತೀರ್ಪುಗೆ ಬೆಲೆ ಗೌರವ ಕೊಟ್ಟು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 