ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ
Chief Minister Siddaramaiah's tour program
ಬಳ್ಳಾರಿ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ಹೊರಟು ಬೆಳಿಗ್ಗೆ 10.50 ಕ್ಕೆ ತೋರಣಗಲ್ನ ಜಿಂದಾಲ್ನ ಏರ್ಸ್ಟ್ರಿಪ್ ಗೆ ಆಗಮಿಸುವರು.
ನಂತರ ಬೆಳಿಗ್ಗೆ 11 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ನಿಂದ ರಸ್ತೆಯ ಮೂಲಕ ಹೊರಟು, 11.30 ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ತಲುಪಿ ಮೇ 20 ರಂದು ರಾಜ್ಯ ಸರ್ಕಾರವು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿರುವ ಸ್ಥಳ ಪರೀಶೀಲನೆ ನಡೆಸುವರು.
ಬಳಿಕ ಮಧ್ಯಾಹ್ನ 01.30 ಗಂಟೆಗೆ ಅಲ್ಲಿಂದ ಹೊರಟು, 02 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ಗೆ ಆಗಮಿಸಿ, 02.15 ಕ್ಕೆ ವಿಶೇಷ ವಿಮಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 