ಮುಖ್ಯಮಂತ್ರಿ ಯಡಿಯೂರಪ್ಪ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು : ಎಚ್ ಡಿ ಕುಮಾರಸ್ವಾಮಿ
ಮೈಸೂರು,ಆ 11 ರಾಜ್ಯದಲ್ಲಿ ನೆರೆ ನಿರ್ವಹಣೆ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ಮೈಸೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು. ಸರಸ್ವತಿಪುರಂನಲ್ಲಿ ಕುಸಿದು ಬಿದ್ದಿದ್ದ ಅಗ್ನಿಶಾಮಕ ದಳ ಕಟ್ಟಡವನ್ನ ಎಚ್ ಡಿ ಕುಮಾರಸ್ವಾಮಿ ವೀಕ್ಷಿಸಿ ಬಳಿಕ ಮಾತನಾಡಿದ ಅವರು, ರಾಜ್ಯದ ನೆರೆ ನಿರ್ವಹಣೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಅನಗತ್ಯವಾಗಿ ಟೀಕೆ ಟಿಪ್ಪಣಿ ಹಾಗೂ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಜನರ ಸಂಕಷ್ಟದಲ್ಲಿದ್ದಾರೆ. ನೊಂದವರಿಗೆ ನೆರವಾಗುವುದೇ ನಮ್ಮ ಮೊದಲ ಆದ್ಯತೆ ಎಂದರು. ರಾಜ್ಯ ಸರ್ಕಾರದ ಖಜಾನೆ ಸುಸ್ಥಿರವಾಗಿದ್ದು 8 ಸಾವಿರ ಕೋಟಿಯನ್ನ ಮೀಸಲಿಟ್ಟಿದ್ದೇನೆ. ಹಣಕಾಸು ಸ್ಥಿತಿ ಸರಿಯಾಗಿಲ್ಲವೆಂಬ ಮುಖ್ಯಮಂತ್ರಿ ಹೇಳಿಕೆ ಸರಿಯಲ್ಲ.ಯಡಿಯೂರಪ್ಪ ಈ ವಿಚಾರದಲ್ಲಿ ಚಿಲ್ಲರೆ ರಾಜಕೀಯ ಬಿಡಬೇಕು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು. ಇನ್ನೆರಡು ದಿನಗಳಲ್ಲಿ ಮೈಸೂರಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು. ಋಣಮುಕ್ತ ಕಾಯಿದೆ ಜಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಸರ್ಕಾರ ಕೂಡಲೇ ಕಾಯ್ದೆ ಜಾರಿಗೆ ಮುಂದಾಗಬೇಕು. 90 ದಿನದೊಳಗೆ ಯೋಜನೆ ಜಾರಿಯಾಗಬೇಕು ಆದರೆ ಈಗಾಗಲೇ 10 ದಿನಗಳು ಕಳೆದಿದೆ. ಯೋಜನೆ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಡಂಗುರ ಸಾರುವ ಕೆಲಸ ಆಗಬೇಕು. ಈ ಬಗ್ಗೆ ಶೀಘ್ರದಲ್ಲೇ ಜೆಡಿಎಸ್ ಕಾರ್ಯಕರ್ತರ ಮೂಲಕ ಪ್ರಚಾರ ಮಾಡಿಸುತ್ತೇನೆ ಎಂದು ಅವರು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 